ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಖಾಸಗಿ ವಿಡಿಯೋ ಸೆರೆಹಿಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಛೇರಿಯಿಂದ ಮೂಲಕ ಉಡುಪಿ ಸಿಟಿ ಬಸ್ ನಿಲ್ದಾಣದ ಮೂಲಕ ಬನ್ನಂಜೆ ಎಸ್.ಪಿ. ಕಚೇರಿ ತನಕ ಶುಕ್ರವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಬಳಿಕ ಪ್ರತಿಭಟನಾ ಸಭೆ ನಡೆಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಮನವಿಯನ್ನು ಸಲ್ಲಿಸಿದರು. ಈ ವೇಳೆ ಜಿಲ್ಲಾ ಬಿಜೆಪಿ ಕಚೇರಿ ಬಳಿಯಿಂದ ಬನ್ನಂಜೆಯ ಎಸ್ಪಿ ಕಚೇರಿಯವರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಯಿತು.
ಇದೇ ಸಂಧರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಡುಪಿ ಶಾಸಕ ಯಶಪಾಲ್ ಸುವರ್ಣ, ಪ್ರಕರಣದಲ್ಲಿ ಪಿಎಫ್ಐ ನಂಟು ಇದೆ. ಪಿಎಫ್ಐ ನಿಷೇಧದ ನಂತರ ಪಿಎಫ್ಐ ಮಹಿಳಾ ಘಟಕ ಸಕ್ರಿಯವಾಗಿರುವ ಬಗ್ಗೆ ಅನುಮಾನವಿದೆ. ಈ ವಿದ್ಯಾರ್ಥಿನಿಯರು ಈ ಕಾರ್ಯಾಚರಣೆಯ ಭಾಗವಾಗಿರಬಹುದು. ರಾಜ್ಯ ಸರ್ಕಾರ ನಡೆಸುತ್ತಿರುವ ತನಿಖೆಯ ಮೇಲೆ ನನಗೆ ವಿಶ್ವಾಸವಿಲ್ಲ. ಪ್ರಕರಣವನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಬೇಕು . ಇಲ್ಲದಿದ್ದರೆ -ರಾಜ್ಯ ಸರ್ಕಾರದೊಂದಿಗೆ ಜಂಟಿ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.