ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಶುಭಕರ ಆಚಾರಿ ನೇಮಕ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಶುಭಕರ ಆಚಾರಿ ಅವರನ್ನು ನೇಮಕ ಮಾಡಲಾಗಿದ್ದು, ಅವರು ಅ.1ರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Call us

Click Here

ಕಳೆದ 30 ವರ್ಷಗಳ ಸುದೀರ್ಘ ಅವಧಿಯಲ್ಲಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ವ್ಯಾಪ್ತಿಯ ವಿವಿಧ ಕಾಲೇಜುಗಳಲ್ಲಿ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಕಾರ್ಕಳದ ಭುವನೇಂದ್ರ ಮತ್ತು ಮೂಡುಬಿದಿರೆ ಮಹಾವೀರ ಕಾಲೇಜುಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ, ಭಂಡರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ.

ಡಾ.ಶುಭಕರಾಚಾರಿ ಅವರು ಮೂಲತಃ ತೀರ್ಥಹಳ್ಳಿಯ ಗಬಡಿ ಗ್ರಾಮದವರಾಗಿದ್ದು, ಸೀತಾರಾಮ ಆಚಾರ್ಯ ಮತ್ತು ಇಂದಿರಾ ಅವರ ಪುತ್ರ. ತೀರ್ಥಹಳ್ಳಿಯ ತುಂಗಭದ್ರಾ ಮಹಾವಿದ್ಯಾಲಯಲ್ಲಿ ಪದವಿ ಶಿಕ್ಷಣದ ನಂತರ ರಾಜ್ಯಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹಾಗೂ ಮಂಗಳೂರು ವಿಶ್ವವಿದ್ಯಾಲಯದಿಂದ ಪಡೆದು ಪಿಎಚ್‌ಡಿ ಪದವಿಯನ್ನು ಪಡೆದಿದ್ದಾರೆ.

ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ. ನಾರಾಯಣ ಶೆಟ್ಟಿ ಅವರು 31 ಜುಲೈ 2023ರಂದು ನಿವೃತ್ತಿ ಹೊಂದಲಿದ್ದು, ಆಗಸ್ಟ್ 1ರಿಂದ ಡಾ. ಶುಭಕರಾಚಾರಿ ಸಂಸ್ಥೆಯನ್ನು ಮುನ್ನಡೆಸಲಿದ್ದಾರೆ.

Leave a Reply