ಕುಂದಾಪುರ: ಇಲ್ಲಿನ ಕೀರ್ತಿಶೇಷ ಶ್ರೀ ಯಡ್ತರೆ ಮಂಜಯ್ಯ ಶೆಟ್ಟಿ ಸ್ಮಾರಕ ಟ್ರಸ್ಟ್‌ನ ಆಶ್ರಯದಲ್ಲಿ ಅ.೨೬ ಸಂಜೆ ೪ಗಂಟೆಗೆ ಯಡ್ತರೆ ಮಂಜಯ್ಯ ಶೆಟ್ಟಿ ಜಯಂತಿ ಉತ್ಸವ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಆರ್. ಎನ್. ಶೆಟ್ಟಿ ಕಲ್ಯಾಣ ಭವನದಲ್ಲಿ ಜರುಗಲಿದೆ. ಸಮಾರಂಭವನ್ನು ಹಿರಿಯ ಉದ್ಯಮಿ ಆರ್. ಎನ್. ಶೆಟ್ಟಿ ಬೆಂಗಳೂರು ಉದ್ಘಾಟಿಸಲಿದ್ದು ಯಡ್ತರೆ ಮಂಜಯ್ಯ ಶೆಟ್ಟಿ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಬಿ. ಜಗನ್ನಾಥ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಎಂದು ಟ್ರಸ್ಟ್ ನ ಪ್ರಮುಖ ಅಪ್ಪಣ್ಣ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ
ಈ ಭಾರಿ ಅಬುದಾಬಿಯ ಖ್ಯಾತ ಉದ್ಯಮಿ ಪದ್ಮಶ್ರೀ ಡಾ| ಬಿ. ಆರ್. ಶೆಟ್ಟಿ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಖ್ಯಾತ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿಯವರಿಗೆ ಯಡ್ತರೆ ಮಂಜಯ್ಯ ಶೆಟ್ಟಿ ಸ್ಮಾರಕ ಪ್ರಶಸ್ತಿ ನೀಡಿ ಪುರಸ್ಕರಿಸಲಾಗುತ್ತಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಎ.ಜಿ. ಕೊಡ್ಗಿ, ನಿಟ್ಟೆ ವಿವಿ ಕುಲಾಧಿಪತಿ ವಿನಯ ಹೆಗ್ಡೆ, ಶಾಸಕರಾದ ಶ್ರೀನಿವಾಸ ಶೆಟ್ಟಿ, ಗೋಪಾಲ ಪೂಜಾರಿ, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ನಿಟ್ಟೆ ವಿವಿ ಸಹಕುಲಾಧಿಪತಿ ಡಾ| ಶಾಂತಾರಾಮ ಶೆಟ್ಟಿ, ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್‌ಫೆರ್ ಟ್ರಸ್ಟ್ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಮಂಗಳೂರು, ವರ್ಲ್ಡ್ ಬಂಟ್ಸ್ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಬಿ. ಸಚ್ಚಿದಾನಂದ ಶೆಟ್ಟಿ ಮಂಗಳೂರು, ಕುಂದಾಪುರ ಪುರಸಭಾ ಅಧ್ಯಕ್ಷೆ ಕಲಾವತಿ ಭಾಗವಹಿಸಲಿದ್ದಾರೆ. ಪ್ರೊ ಎಂ. ಸುಬ್ಬಣ್ಣ ಶೆಟ್ಟಿ ಕೋಟೇಶ್ವರ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ್ ಅಡ್ಯಂತಾಯ, ನೇತ್ರತಜ್ಞ ಡಾ. ವೈ. ಎಸ್. ಹೆಗ್ಡೆ, ಯು.ಟಿ. ಆಳ್ವ ಮಂಗಳುರು, ಡಾ. ಎಂ ಲಕ್ಷ್ಮೀನಾರಾಯಣ ಶೆಟ್ಟಿ ಮಂಗಳೂರು, ಯು. ಸೀತಾರಾಮ ಶೆಟ್ಟಿ ಉಪ್ಪಿಂದ ವೇದಿಕೆಯಲ್ಲಿ ಉಪಸ್ಥಿತರಿರುತ್ತಾರೆ. (ಕುಂದಾಪ್ರ ಡಾಟ್ ಕಾಂ ಸುದ್ದಿ)
ಹಾಸ್ಯ ಕಲಾವಿದರಿಂದ ತಾಳ ಮದ್ದಳೆ
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರಸಿದ್ಧ ಹಾಸ್ಯ ಕಲಾವಿದರ ತಾಳಮದ್ದಳೆ ’ಉತ್ತರ ಕುಮಾರನ ಪೌರುಷ’ ನಡೆಯಲಿದೆ. ಸೀತಾರಾಮಕುಮಾರ್ ಕಟೀಲು, ರವೀಂದ್ರ ದೇವಾಡಿಗ, ರಾಮ ಜೋಯಿಷಿ ಬೆಳಾರೆ, ಹಳ್ನಾಡಿ ಜಯರಾಮ ಶೆಟ್ಟಿ ಕಲಾವಿದರಾಗಿ ಭಾಗವಹಿಸಲಿದ್ದಾರೆ. ಗಿರೀಶ್ ರೈ ಕಟ್ಟೆಪದವು ಭಾಗವತರಾಗಿ, ಜನಾರ್ಧನ ತೋಳ್ಪಡಿತ್ತಾಯ ಮದ್ದಳೆಗಾರರಾಗಿ, ಸುಬ್ರಹ್ಮಣ್ಯ ಭಟ್, ದೇಲಂತ ಮಜಲು ಚಂಡೆವಾದಕರಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಅಶೋಕ್‌ಕುಮಾರ್ ಶೆಟ್ಟಿ, ಟ್ರಸ್ಟ್‌ನ ಅಧ್ಯಕ್ಷ ಬಿ. ಜಗನ್ನಾಥ ಶೆಟ್ಟಿ, ಆವರ್ಸೆ ಸುಧಾಕರ ಶೆಟ್ಟಿ, ಯು.ಎಸ್. ಶೆಣೈ ಮೊದಲಾದವರು ಉಪಸ್ಥಿತರಿದ್ದರು.