Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆರೋಗ್ಯ, ಶಿಕ್ಷಣ ಸೂಚ್ಯಂಕದಲ್ಲಿ ಹಿಂದೆಬಿದ್ದ ಉಡುಪಿ ಜಿಲ್ಲೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಗರಂ
    ಉಡುಪಿ ಜಿಲ್ಲೆ

    ಆರೋಗ್ಯ, ಶಿಕ್ಷಣ ಸೂಚ್ಯಂಕದಲ್ಲಿ ಹಿಂದೆಬಿದ್ದ ಉಡುಪಿ ಜಿಲ್ಲೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಗರಂ

    Updated:02/08/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಜನರ ತೆರಿಗೆ ಹಣದಿಂದ ಅಧಿಕಾರಿಗಳಿಗೆ ಸ್ಥಾನ ಮಾನ ಸಂಬಳ ಸವಲತ್ತುಗಳು ಸಿಗುವುದು. ಜಿಲ್ಲಾ ಮಟ್ಟದ ಅಧಿಕಾರಿಗಳು ಕಛೇರಿಯಲ್ಲಿ ಕುಳಿತುಕೊಳ್ಳುವುದಷ್ಟೇ ಅಲ್ಲದೇ ಸ್ಥಳಕ್ಕೆ ಭೇಟಿ ನೀಡಬೇಕು. ಅಧಿಕಾರಿಗಳು ನಿಲಕ್ಷ್ಯ, ಉದಾಸೀನ ತೋರಿಸಿದರೆ ಜನರಿಗೆ ಸ್ಪಂದಿಸದಿದ್ದರೆ ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಸಹಿಸಲು ಸಾಧ್ಯವಿಲ್ಲ. ಜನ ಸ್ಪಂದನೆಗೆ ಸಿದ್ದರಿಲ್ಲದವರು ಸ್ಥಾನ ತ್ಯಾಗ ಮಾಡಿ. ಜನಸ್ಪಂದನೆಗೆ ಸಾಕಷ್ಟು ಅಧಿಕಾರಿಗಳು ಇದ್ದಾರೆ ಎಂದು ಸಿಎಂ. ಸಿದ್ಧರಾಮಯ್ಯ ಗುಡುಗಿದರು.

    Click Here

    Call us

    Click Here

    ಅವರು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಪಂ.ನ ಡಾ| ವಿ.ಎಸ್‌.ಆಚಾರ್ಯ ಸಭಾಂಗಣದಲ್ಲಿ ಸೋಮವಾರ ಉಡುಪಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಪ್ರಕೃತಿ ವಿಕೋಪ ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲಾ ರಕ್ಷಣಾಧಿಕಾರಿಗಳು ಠಾಣೆಗಳಿಗೆ ಭೇಟಿ ನೀಡಬೇಕು. ದೂರುಗಳು ಬಂದಾಗ ಮೊದಲು ಎಫ್ಐಆರ್ ದಾಖಲಿಸಿಕೊಳ್ಳಿ ಎಂದು ಸಲಹೆ ನೀಡಿದರು. ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿ ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು. ಪಕ್ಷ ರಾಜಕಾರಣ ಚುನಾವಣೆ ವೇಳೆ ಮಾತ್ರ ಎಂದರು.

    ಆರೋಗ್ಯ ಸೂಚ್ಯಂಕದಲ್ಲಿ ಕುಸಿತಕ್ಕೆ ಗರಂ:
    2015ರಲ್ಲಿ ಆರೋಗ್ಯ ಸೂಚ್ಯಂಕದಲ್ಲಿ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಈಗ 18ನೇ ಸ್ಥಾನದಲ್ಲಿರುವುದಕ್ಕೆ, ತಾಯಂದಿರು ಮತ್ತು ಮಕ್ಕಳ ಸಾವಿನ ಪ್ರಮಾಣದಲ್ಲಿ ಏರಿಕೆ ಆಗಿರುವುಕ್ಕೆ ಗರಂ ಆದ ಮುಖ್ಯಮಂತ್ರಿಗಳು ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಉಡುಪಿ ಸುಶಿಕ್ಷಿತರ ಜಿಲ್ಲೆ. ಆರೋಗ್ಯ ಸೂಚ್ಯಂಕದಲ್ಲಿ ಈ ಪ್ರಮಾಣದ ಕುಸಿತ ಕಂಡಿರುವುದಕ್ಕೆ ನಿಮ್ಮ ಹೊಣೆಗಾರಿಕೆ ಇಲ್ಲವಾ ಎಂದು ಡಿಹೆಚ್ಒ ಅವರನ್ನು ಪ್ರಶ್ನಿಸಿದ ಮುಖ್ಯಮಂತ್ರಿಗಳು ಜಿಲ್ಲೆಯನ್ನು ಮತ್ತೆ ಮೊದಲ ಸ್ಥಾನಕ್ಕೆ ತರಬೇಕು. ಇಲ್ಲದಿದ್ದರೆ ಸಸ್ಪೆಂಡ್ ಆಗಬೇಕಾಗುತ್ತದೆ ಎಂದು ಎಚ್ಚರಿಸಿದ ಬಳಿಕ ಪಕ್ಕದಲ್ಲೇ ಇದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಈ ಬಗ್ಗೆ ನಿಗಾ ವಹಿಸಿ ಸುಧಾರಣೆ ಕಾಣದಿದ್ದರೆ ಡಿಹೆಚ್ಒ ಅವರನ್ನು ಮುಲಾಜಿಲ್ಲದೆ ಸಸ್ಪೆಂಡ್ ಮಾಡಿ ಎಂದು ಸೂಚಿಸಿದರು.

    ಶಿಕ್ಷಣದಲ್ಲೂ ಕುಸಿತ:
    ಉಡುಪಿ ಜಿಲ್ಲೆ ಶೈಕ್ಷಣಿಕ ಸೂಚ್ಯಂಕದಲ್ಲಿ 13ನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ಜಿಲ್ಲಾ ಶಿಕ್ಷಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ಈ ಕುಸಿತ ನಿಮಗೆ ನಾಚಿಕೆ, ಬೇಸರ ತರುವುದಿಲ್ಲವೇ ಎಂದು ಪ್ರಶ್ನಿಸಿದರು. ಮುಂದಿನ ಅವಧಿ ವೇಳೆಗೆ ನಿಮ್ಮ ಮತ್ತು ಜಿಲ್ಲೆಯ ಕಾರ್ಯಕ್ಷಮತೆ ಕಾಣದಿದ್ದರೆ ನಿಮ್ಮನ್ನು ಶಾಶ್ವತವಾಗಿ ಮನೆಗೆ ಕಳಹಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಪೂರ್ಣ ಮನೆ ಬಿದ್ದರೆ 5ಲಕ್ಷ ಪರಿಹಾರ:
    ಮಳೆ ಅನಾಹುತಗಳಲ್ಲಿ ಪೂರ್ಣ ಮನೆ ಹಾನಿ ಆಗಿದ್ದರೆ 5 ಲಕ್ಷ ರೂ ಪರಿಹಾರ ನೀಡಬೇಕು. ಇದು ಸರ್ಕಾರದ ನಿರ್ಧಾರ. ಮನೆ ಸ್ವಂತ ಜಾಗದಲ್ಲಿ ಕಟ್ಟಿದ್ದಾರೋ-ಇಲ್ಲವೋ, ಹಕ್ಕು ಪತ್ರ ಇದೆಯೋ-ಇಲ್ಲವೋ ಎನ್ನುವುದನ್ನು ನೋಡದೆ ಮಳೆಯಿಂದ ಬಿದ್ದ ಮನೆಗೆ ಪರಿಹಾರ ನೀಡಿ. ಮೊದಲು ಮನೆ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    Click here

    Click here

    Click here

    Call us

    Call us

    3 ವರ್ಷಗಳಲ್ಲಿ ಕಾಲು ಸಂಕ ನಿರ್ಮಾಣಕ್ಕೆ ಸೂಚನೆ:
    ಗ್ರಾಮೀಣ ಭಾಗದ ಜನರಿಗೆ ಸಮಸ್ಯೆ ಆಗಿರುವ ಕಾಲು ಸಂಕದಿಂದ ಆಗಿರುವ ಅನಾಹುತಗಳನ್ನು ತಪ್ಪಿಸಲು ಸೇತುವೆಗಳನ್ನು ನಿರ್ಮಿಸಬೇಕು. ನರೇಗಾ ಮತ್ತು ಲೋಕೋಪಯೋಗಿ ಜಂಟಿಯಾಗಿ ಸೇತುವೆಗಳನ್ನು ನಿಮಿಸಲು ಯೋಜನೆ ಸಿದ್ದಪಡಿಸಿ ಮತ್ತು ಎರಡು ವರ್ಷಗಳಲ್ಲಿ ಸೇತುವೆ ನಿರ್ಮಾಣ ಕೆಲಸಗಳು ಮುಗಿಯುವ ರೀತಿಯಲ್ಲಿ ಕೆಲಸ ಮಾಡಿ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

    ಮಳೆ ಹಾನಿ ಸಮೀಕ್ಷೆ ನಡೆಸಿ ಪರಿಹಾರ ನೀಡಿ:
    ಮಳೆ ಹಾನಿಗೆ ಸಂಬಂಧಪಟ್ಟಂತೆ ಸಂಪೂರ್ಣ ಸಮೀಕ್ಷೆ ನಡೆಸಿ. ಬೆಳೆ ಹಾನಿಗೊಳಗಾದವರಿಗೆ ತಪ್ಪದೆ ಪರಿಹಾರ ಸಿಗಬೇಕು. ಸ್ಥಳಕ್ಕೆ ಭೇಟಿ ನೀಡಿ ಸಮೀಕ್ಷೆ ನಡೆಸಿ. ಬೆಳೆ ಹಾನಿ ಆದವರಿಗೆ ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸಬೇಕು. ಒಮ್ಮೆ ಬೆಳೆ ಪರಿಹಾರ ಕೊಟ್ಟ ಬಳಿಕ ಪರ್ಯಾಯ ಬೆಳೆ ಬೆಳೆ ಬೆಳೆಯಲು ಅಗತ್ಯವಾದ ಬೀಜ, ಗೊಬ್ಬರ ಸೇರಿದಂತೆ ಎಲ್ಲಾ ಸವಲತ್ತುಗಳನ್ನು ಒದಗಿಸಿ. ಅಡಕೆ ಬೆಳೆಗೆ ಬಂದಿರುವ ಎಲೆಚುಕ್ಕೆ ರೋಗದ ಬಗ್ಗೆ ಕೃಷಿ ವಿಜ್ಞಾನಿಗಳ ನೆರವು ಪಡೆದು ಪರಿಹಾರ ಕಂಡುಕೊಳ್ಳಬೇಕು ಎಂದು ಸೂಚಿಸಿದರು.

    ರಸ್ತೆ ಅಪಘಾತ ಸಾವು-ಸೈಬರ್ ಕ್ರೈಂ ಹೆಚ್ಚಳಕ್ಕೆ ಕ್ರಮ ವಹಿಸಲು ಸೂಚನೆ
    ಜಿಲ್ಲೆಯಲ್ಲಿ ರಸ್ತೆ ಗುಂಡಿಗಳು, ಅಪಘಾತ ಮತ್ತು ಸಾವುಗಳ ಪ್ರಮಾಣ ಹೆಚ್ಚಳ ಹಾಗೂ ಸೈಬರ್ ಅಪರಾಧಗಳ ಹೆಚ್ಚಳ ಬಗ್ಗೆಯೂ ಜಿಲ್ಲಾ ರಕ್ಷಣಾಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿಗಳು ಏನೇನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು. ಸೂಕ್ತ ಉತ್ತರ ಬರದಿದ್ದಾಗ ಪೊಲೀಸ್ ಇಲಾಖೆಯ ಜವಾಬ್ದಾರಿ. ಇದನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಎಂದು ಲೋಕೋಪಯೋಗಿ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

    ಸಭೆಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೀನುಗಾರಿಕಾ ಇಲಾಖಾ ಸಚಿವ ಮಾಂಕಾಳ ವೈದ್ಯ, ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಸಿಇಓ ಹೆಚ್. ಪ್ರಸನ್ನ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಶಾಸಕರುಗಳಾದ ವಿ. ಸುನಿಲ್ ಕುಮಾರ್, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳೆ, ಸುರೇಶ್ ಶೆಟ್ಟಿ ಗುರ್ಮೆ, ಯಶಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಮಂಜುನಾಥ ಭಂಡಾರಿ ಸೇರಿದಂತೆ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೆದುಳು ನಿಷ್ಕ್ರಿಯಗೊಂಡ 76ನೇ ವಯಸ್ಸಿನ ಗಂಗೊಳ್ಳಿಯ ಮಹಿಳೆಯ ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ

    07/07/2026

    ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

    07/07/2026

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026
    Leave A Reply Cancel Reply

    5 × five =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಗೆ ಚಾಲನೆ
    • ಪಂಚವರ್ಣದ ವತಿಯಿಂದ ಆಸಾಡಿ ಒಡ್ರ್ ಕಾರ್ಯಕ್ರಮ ಪೋಸ್ಟರ್ ಬಿಡುಗಡೆ
    • ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಲಯ ಮಟ್ಟದ ಕರಾಟೆ ಮತ್ತು ಯೋಗಸ್ಪರ್ಧೆ
    • ಸಿಎಂಎ ಯುಎಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿ
    • ಕೋಟ ಅಮೃತೇಶ್ವರೀ ದೇಗುಲದಲ್ಲಿ ದುರ್ಗಾಹೋಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.