ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬಿಜೆಪಿ ಬೈಂದೂರು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಬುಧವಾರ ತ್ರಾಸಿ ಕೊಂಕಣ್ ಖಾರ್ವಿ ಸಭಾಭವನದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಉದ್ಘಾಟಿಸಿ ಮಾತನಾಡಿ, ಕಾರ್ಯಕರ್ತರಿಗೆ ಸಿದ್ದಾಂತ ಮತ್ತು ಬದ್ಧತೆ ಮುಖ್ಯ. ಜೊತೆಗೆ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದನೆ ಮಾಡಬೇಕಾಗಿದೆ. ಕಾರ್ಯಕರ್ತನ ಜೊತೆಗಿದ್ದು ಪಕ್ಷವನ್ನು ಸಂಘಟಿಸುವ ಕೆಲಸವಾಗಬೇಕು. ಈ ವರ್ಷದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಸಿಕ್ಕಿಲ್ಲ ಎಂದು ಹೇಳಿದರು.
ಬೈಂದೂರು ಮಂಡಲ ದೀಪಕ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ಮುಂದಿನ ಮೂರು ತಿಂಗಳ ಅವಧಿಗೆ ಪಕ್ಷದ ಕಾರ್ಯ ಯೋಜನೆಗಳು ಮತ್ತು ಹೋರಾಟಗಳ ಬಗ್ಗೆ ಚರ್ಚಿಸಲು ಸಭೆ ನಡೆಸುತ್ತೇವೆ. ಕಾರ್ಯಕರ್ತರು ತಮ್ಮ ಗ್ರಾಮಗಳಲ್ಲಿ ಪಕ್ಷದ ಕೆಲಸವನ್ನ ಮಾಡುವ ನಿಟ್ಟಿನಲ್ಲಿ ಶ್ರಮಿಸಬೇಕು. ತಮ್ಮ ತಮ್ಮ ಗ್ರಾಮಗಳಲ್ಲಿ ಆಗಬೇಕಾದಂತ ಚಟುವಟಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಆನಂದ ಖಾರ್ವಿ, ಜಿಲ್ಲಾ ಕಾರ್ಯದರ್ಶಿ ಮಾಲತಿ ನಾಯಕ್, ಶಕ್ತಿ ಕೇಂದ್ರ ಅಧ್ಯಕ್ಷ ಮಿಥುನ್ ಬಿಜೂರು, ಭೂತ್ ಅಧ್ಯಕ್ಷ ರಾಘವೇಂದ್ರ ದೇವಾಡಿಗ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯ ಶ್ಯಾಮಲ ಕುಂದರ್, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ವಿನೋದ್ ಭಂಡಾರಿ ಕಾರ್ಯಕ್ರಮವನ್ನು ನಿರೂಪಿಸಿದರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಶೆಟ್ಟಿಗಾರ್, ವಂದಿಸಿದರು.