ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಪ್ರಥಮ ಪೋಷಕ-ಶಿಕ್ಷಕರ ಸಭೆ ನಡೆಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ, ಬದಲಾದ ಪರೀಕ್ಷಾ ಪದ್ದತಿಯ ಕುರಿತು ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಈ ಕುರಿತು ಮಾತನಾಡಿದರು.
ಉಡುಪಿಯ ತ್ರಿಷಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾಗಿರುವ ಸಿಎ ಗೋಪಾಲಕೃಷ್ಣ ಭಟ್ ಅವರು ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ಸಿಎ/ಸಿಎಸ್ ಕೋರ್ಸ್ ಗಳು ಬಹಳಷ್ಟು ಪ್ರಯೋಜನಕಾರಿ,ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ವಾಣಿಜ್ಯ ಕಲಿಕೆಯ ಜೊತೆ-ಜೊತೆಗೆ ಸಿಎ/ಸಿಎಸ್ ಕೋರ್ಸುಗಳನ್ನು ಅಭ್ಯಾಸ ಮಾಡಿದರೆ ಸಾಕಷ್ಟು ಅವಕಾಶಗಳು ಲಭಿಸುತ್ತವೆ ಎನ್ನುತ್ತಾ ಸಂಪೂರ್ಣ ಮಾಹಿತಿಯನ್ನು ನೀಡಿದರು.
ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ್ ಪೂಜಾರಿ, ಬೋಧಕ ಬೋಧಕೇತರ ವೃಂದದವರು, ವಿದ್ಯಾರ್ಥಿಗಳು,ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು. ಈಗಾಗಲೇ ನಡೆದ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಪೋಷಕರಿಗೆ ನೀಡಿ ಕಲಿಕಾ ಪ್ರಗತಿಯ ಕುರಿತು ಚರ್ಚಿಸಲಾಯಿತು.
ಉಪನ್ಯಾಸಕ ಉದಯ್ ನಾಯ್ಕ್ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ಅಭಿಜಿತ್ ವಂದಿಸಿದರು.