ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ ಹಾಗೂ ಜಿ. ಶಂಕರ್ ಪ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ ಇವರ ನೇತ್ರತ್ವದಲ್ಲಿ. ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ಇವರ ಸಹಬಾಗಿತ್ವದಲ್ಲಿ ಹಾಗೂ ಮೊಗವೀರ ಮಹಜನ ಸೇವಾ ಸಂಘ.ರಿ.ಮುಂಬೈ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇವರ ಸಹಕಾರದೊಂದಿಗೆ ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನದ ವಠಾರದಲ್ಲಿ ವನ ಮಹೋತ್ಸವ ಆಯೋಜಿಸಲಾಯಿತು.
ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್., ಕುಂದರ್ ಇವರು ಅಧ್ಯಕ್ಷತೆ ವಹಿಸಿದ್ದರು. ಮೊಗವೀರ ಯುವ ಸಂಘಟನೆ ರಿ., ಉಡುಪಿ ಜಿಲ್ಲೆ ಇದರ ಜಿಲ್ಲಾ ಅಧ್ಯಕ್ಷರಾದ ರಾಜೇಂದ್ರ ಸುವರ್ಣ ಇವರು ಸಾಂಕೇತಿಕವಾಗಿ ಗಿಡ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖಾ ಅಧ್ಯಕ್ಷರಾದ ಉದಯ್ ಕುಮಾರ್ ಹಟ್ಟಿಯಂಗಡಿ, ಮಾಜಿ ಅಧ್ಯಕ್ಷರಾದ ಎಮ್.ಎಮ್ ಸುವರ್ಣ, ಮಹಾಜನ ಸೇವಾ ಸಂಘದ ಶಾಖಾ ಕಾರ್ಯದರ್ಶಿ ಪ್ರಭಾಕರ್ ಎನ್ ಸೇನಾಪುರ, ಘಟಕದ ಗೌರವ ಅಧ್ಯಕ್ಷ ಉಮೇಶ್ ಬಡಾಕೆರೆ, ಮೊಗವೀರ ಸ್ತ್ರಿಶಕ್ತಿ ಅಧ್ಯಕ್ಷೆ ಸುಮಿತ್ರ ಆನಂದ, ಸ್ತ್ರೀ ಶಕ್ತಿಯ ನಿಯೋಜಿತ ಅಧ್ಯಕ್ಷೆ ಶ್ಯಾಮಲಾ ಗೋಪಾಲ ಉಪಸ್ಥಿತರಿದ್ದರು.
ಘಟಕದ ಮಾಜಿ ಅಧ್ಯಕ್ಷರಾದ ರಾಜು ಎನ್ ಶ್ರೀಯಾನ್ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು. ಪ್ರಭಾಕರ್ ಸೇನಾಪುರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹೆಮ್ಮಾಡಿ ಘಟಕದ ಮಾಜಿ ಅಧ್ಯಕ್ಷ ರಾಘವೇಂದ್ರ ನೆಂಪು ವಂದಿಸಿದರು. ಮತ್ತು ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಕೋಟೆ ಜಾಗದಲ್ಲಿ ವಿವಿಧ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು.