ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಆಸ್ಪತ್ರೆಯ ಕುಂದುಕೊರತೆ ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿದಂತೆ ಸುತ್ತಲಿನ ಗ್ರಾಮಗಳಿಂದ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗುತ್ತಿರುವ ಬಗ್ಗೆ ವಿಚಾರಿಸಿದರು. ಆಸ್ಪತ್ರೆಯ ವ್ಯವಸ್ಥೆ, ಸಿಬ್ಬಂದಿ ಕೊರತೆ, ಪಿಠೋಪಕರಣ, ಮೂಲಸೌಕರ್ಯಗಳ ಬಗ್ಗೆ ವೈದ್ಯಾಧಿಕಾರಿಯ ಜೊತೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಸಾಮ್ರಾಟ್ ಶೆಟ್ಟಿ, ದಿನೇಶ್ ಆಚಾರ್ಯ, ವಿಜಯ ಪುತ್ರನ್ ಪಕ್ಷದ ಪ್ರಮುಖರು ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ಆಸ್ಪತ್ರೆ ಸಿಬ್ಬಂದಿ ವರ್ಗದವರು, ಮತ್ತಿತರು ಉಪಸ್ಥಿತರಿದ್ದರು.
ಬಳಿಕ ಕಾವ್ರಾಡಿ ಗ್ರಾಮ ಪಂಚಾಯತ್ಗೆ ಪ್ರಥಮ ಭಾರಿಗೆ ಭೇಟಿ ನೀಡಿ ನೂತನ ಗ್ರಾಮ ಪಂಚಾಯತ್ ಕಟ್ಟಡ ಬಗ್ಗೆ ಪಂಚಾಯತ್ ಸದ್ಯಸರ ಜೊತೆ ಚರ್ಚಿಸಿದರು.