ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಕೋಟೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಅವರು ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳಿಗೆ ಉತ್ತಮ ಸೇವೆ ಒದಗಿಸುವಂತೆ ಹಾಗೂ ತುರ್ತು ಸಂದರ್ಭದಲ್ಲಿ ಅಗತ್ಯವಿರುವ ಎಲ್ಲಾ ಔಷಧಗಳ ದಾಸ್ತಾನು ಇಟ್ಟುಕೊಳ್ಳುವಂತೆ ಸೂಚನೆ ನೀಡಿದರು.