ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ 2022-23 ನೇ ಸಾಲಿನ ವಾರ್ಷಿಕ ಮಹಾ ಸಭೆಯಲ್ಲಿ ಮರವಂತೆ ಬಡಾಕೆರೆ ವ್ಯ. ಸೇ. ಸಹಕಾರಿ ಸಂಘ(ನಿ), ನಾವುಂದದ ಅತ್ಯುತ್ತಮ ಕಾರ್ಯ ವೈಖರಿ ಮತ್ತು ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಏನ್. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಎಂ. ವಿನಾಯಕ ರಾವ್, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಬ್ಯಾಂಕಿನ ಎಲ್ಲಾ ನಿರ್ದೇಶಕರು, ಮ.ಬ.ವ್ಯ.ಸೇ.ಸಹಕಾರಿಯ ನಿರ್ದೇಶಕ ವಿನಾಯಕ ರಾವ್ ಉಪಸ್ಥಿತರಿದ್ದರು.










