Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ನ್ಯಾಯಾಲಯದ ಆದೇಶ ಮೀರಿದ ಕುಸುಮಾವತಿ ಹಾಗೂ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಲು ಆಗ್ರಹ
    ಊರ್ಮನೆ ಸಮಾಚಾರ

    ಕುಂದಾಪುರ: ನ್ಯಾಯಾಲಯದ ಆದೇಶ ಮೀರಿದ ಕುಸುಮಾವತಿ ಹಾಗೂ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಲು ಆಗ್ರಹ

    Updated:28/08/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,28:
    ಕುಂದಾಪುರದ ಶಾಸ್ತ್ರಿ ವೃತ್ತದಲ್ಲಿ ಸೌಜನ್ಯ ಪ್ರಕರಣದ ಮರು ತನಿಖೆಗಾಗಿ ನಡೆದ ಜನಾಗ್ರಹ ಸಭೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ವೈಯುಕ್ತಿಕ ತೇಜೋವಧೆ ಮಾಡಿರುವುದು ಖಂಡನೀಯ. ಮಹೇಶ್ ಶೆಟ್ಟಿ ತಿಮರೋಡಿಯವರು ಬಹಿರಂಗ ಸಭೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಅಸತ್ಯ ಮತ್ತು ದ್ವೇಷದ ಬೀಜ ಬಿತ್ತಿರುವುದು, ತಾವು ಹೇಳಿದ ಕಟ್ಟುಕತೆಯನ್ನೇ ಹಳ್ಳಿ ಹಳ್ಳಿಗಳಲ್ಲಿ ಅಪಪ್ರಚಾರ ಮಾಡುವಂತೆ ಜನರಿಗೆ ಸಾರ್ವಜನಿಕ ಕರೆ ಕೊಟ್ಟಿರುವುದು ಸಮಾಜದ ಶಾಂತಿ ಮತ್ತು ವ್ಯವಸ್ಥೆಯನ್ನು ಹಾಳುಮಾಡುವ ಕೃತ್ಯವಾಗಿದೆ ಹಾಗೂ ಆಧಾರರಹಿತವಾಗಿ ವೈಯುಕ್ತಿಕ ನಿಂದನೆ, ಧಾರ್ಮಿಕ ನಿಂದನೆ ಕಾನೂನಾತ್ಮಕವಾಗಿ ಅಪರಾಧವಾಗಿದೆ. ಇವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ದೂರು ಸಲ್ಲಿಸಲಾಗಿದೆ.

    Click Here

    Call us

    Click Here

    ಶ್ರೀ ಕ್ಷೇತ್ರದ ಅಭಿಮಾನಿಗಳ ಪರವಾಗಿ ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕರಿಗೆ ದೂರು ಸಲ್ಲಿಸಲಾಗಿದೆ. ಕುಸುಮಾವತಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಪ್ರಚೋದನಕಾರಿ ಮಾತುಗಳನ್ನಾಡಲು ಅವಕಾಶ ಮಾಡಿಕೊಟ್ಟಿರುವುದು ಕಾನೂನು ಬಾಹಿರವಾಗಿದೆ. ಬಹಿರಂಗ ಸಭೆಯಲ್ಲಿ ಮಾತನಾಡಿದವರನ್ನು ಬಂಧಿಸಿ ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ. ಒಂದು ವೇಳೆ ಕಾನೂನು ಕ್ರಮ ಕೈಗೊಳ್ಳದೆ ಇದ್ದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯವರ ಕಾನೂನು ಬಾಹಿರ ಕೃತ್ಯಕ್ಕೆ ಉಗ್ರ ಪ್ರತಿಭಟನೆ ಮಾಡುವ ಹಕ್ಕು ಶ್ರೀ ಕ್ಷೇತ್ರದ ಅಭಿಮಾನಿಗಳಾದ ನಮಗಿರುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕುಂದಾಪ್ರ ಡಾಟ್ ಕಾಂ.

    ಕುಂದಾಪುರದಲ್ಲಿ ನಡೆದ ಸಭೆಯಲ್ಲಿ ವೀರೇಂದ್ರ ಹೆಗ್ಗಡೆರವರು ಹಾಗೂ ಧರ್ಮಸ್ಥಳದ ಬಗ್ಗೆ ಯಾವುದೇ ಅವಮಾನಕರ ಮತ್ತು ತೇಜೋವಧೆ ಮಾತುಗಳನ್ನಾಡದಂತೆ ನಿಬಂಧಿಸಬೇಕೆಂದು ಉಡುಪಿ ಜಿಲ್ಲಾ ಎಸ್ಪಿ ಅವರಿಗೆ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಮೂಲಕ ಮನವಿ ನೀಡಿದಾಗಲು ಸದ್ರಿ ಸಭೆಯಲ್ಲಿ ಪ್ರಚೋಧನಕಾರಿ ಹಾಗೂ ಅವಹೇಳನಕಾರಿಯಾಗಿ ಮಾತನಾಡಲು ಪೋಲಿಸ್ ಇಲಾಖೆ ಅವಕಾಶ ನೀಡಿರುವುದನ್ನು ಖಂಡಿಸುತ್ತೇವೆ. ಯಾವುದೇ ರೀತಿಯಲ್ಲಿ ಕ್ಷೇತ್ರದ ವಿರುದ್ಧ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ ಕರ್ನಾಟಕ ಘನ ನ್ಯಾಯಾಲಯವು ಪ್ರತಿಬಂಧಕಾಜ್ಞೆಯನ್ನು ನೀಡಿದ್ದರೂ ಅದನ್ನು ಧಿಕ್ಕರಿಸಿ ನ್ಯಾಯಾಲಯದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕುಂದಾಪ್ರ ಡಾಟ್ ಕಾಂ.

    ಶ್ರೀ ಕ್ಷೇತ್ರ ಧರ್ಮಸ್ಥಳ ಆಶ್ರಯದಲ್ಲಿ ನಡೆಯುವ ಹತ್ತಾರು ಯೋಜನೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಲಕ್ಷಾಂತರ ಮಂದಿಗೆ ಈ ವಿದ್ಯಮಾನ ನೋವನ್ನುಂಟುಮಾಡಿದೆ ಹಾಗೂ ವಿಶ್ವದಾದ್ಯಂತ ಇರುವ ಕೋಟ್ಯಾಂತರ ಭಕ್ತರು ಸೌಜನ್ಯ ಪ್ರಕರಣದ ಹೆಸರಲ್ಲಿ ಹೋರಾಟಗಾರರೆಂಬುವವರು ಮಾಡಿದ ಆಪಾದನೆಗಳನ್ನು ತಪ್ಪು ತಿಳಿಯುವ ಸಂಭವವಿರುತ್ತದೆ. ಈ ಕಾರಣಕ್ಕಾಗಿ ಸೌಜನ್ಯ ಪ್ರಕರಣದ ಬಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳು ಹಾಗೂ ಅವರ ಕುಟುಂಬದ ವಿರುದ್ಧ ನೀಡಿದ ಹೇಳಿಕೆಗಳೆಲ್ಲಾ ದ್ವೇಷದ ಹೇಳಿಕೆಗಳು. ಸನಾತನ ಧರ್ಮದ ಹೆಸರಿನಲ್ಲಿ ತಪ್ಪು ಮಾಹಿತಿ ನೀಡುತ್ತಾ ಯುವಕರನ್ನು ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಇವರ ಆಶಯಗಳು ಧರ್ಮ ಶ್ರದ್ಧೆಯ ವಿರುದ್ಧವಾಗೇ ಇವೆ. ಈ ಬಗ್ಗೆ ಸಾರ್ವಜನಿಕರು ಎಚ್ಚರದಿಂದ ಇರಬೇಕು ಎಂದು ವಿನಂತಿಸುತ್ತೇವೆ ಎಂದೂ ಅವರು ಮಾಧ್ಯಮಕ್ಕೆ ನೀಡಿದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ.

    ಕುಸುಮಾವತಿ ಮತ್ತು ಮಹೇಶ್ ಶೆಟ್ಟಿ ತಿಮರೋಡಿರವರ ಹೇಳಿಕೆಗಳು ಎಲ್ಲವೂ ಪೂರ್ವಾಗ್ರಹ ಪೀಡಿತ, ಕಪೋಲ ಕಲ್ಪಿತ ಮತ್ತು ದ್ವೇಷದ ಹೇಳಿಕೆಗಳಾಗಿವೆ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಶ್ರೀ ಕ್ಷೇತ್ರದ ಅಭಿಮಾನಿಗಳ ಪರವಾಗಿ ಜಿಲ್ಲಾ ಜನ ಜಾಗೃತಿ ವೇದಿಕೆಯ ಪರವಾಗಿ ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಗಡೆ, ಪ್ರಗತಿ ಬಂಧು- ಸ್ವ ಸಹಾಯ ಸಂಘಗಳ ಒಕ್ಕೂಟದ ಪರವಾಗಿ ರಟ್ಟಾಡಿ ನವೀನ್‌ಚಂದ್ರ ಶೆಟ್ಟಿ, ಗೀತಾಂಬ, ಚಂದ್ರಾವತಿ ಮತ್ತು ಪ್ರದೀಪ್ ಮಡಿವಾಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು, ಕಾರ್ಯಕರ್ತರು, ಕುಂದಾಪುರ ಪೋಲೀಸರಿಗೆ ದೂರು ಸಲ್ಲಿಸುವ ವೇಳೆ ಉಪಸ್ಥಿತರಿದ್ದರು. /ಕುಂದಾಪ್ರ ಡಾಟ್ ಕಾಂ/

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    four × 5 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.