ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಜ್ಯ ಸರಕಾರ ಮಹಾತ್ವಕಾಂಕ್ಷಿ ನಾಲ್ಕನೇ ಗ್ಯಾರೆಂಟಿ ‘ಗೃಹಲಕ್ಷ್ಮೀ’ ರಾಜ್ಯಾದ್ಯಂತ ಜಾರಿಗೆ ಬಂದಿದ್ದು, ಕುಂದಾಪುರ ಬೈಂದೂರು ತಾಲೂಕಿನ ವಿವಿಧೆಡೆ ಚಾಲನೆ ದೊರೆಯಿತು.
ಕುಂದಾಪುರ ಪುರಸಭೆಯಿಂದ ಮೊಗವೀರ ಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಕ್ಕೆ ತಹಶೀಲ್ದಾರ್ ಶೋಭಾಲಕ್ಷ್ಮೀ ಚಾಲನೆ ನೀಡಿದರು.
ಬೈಂದೂರು ತಾಲೂಕು ಆಡಳಿತ ಮತ್ತು ಪಟ್ಟಣ ಪಂಚಾಯತ್ ವತಿಯಿಂದ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಗೃಹಲಕ್ಷ್ಮೀ ಯೋಜನೆಯ ವೀಕ್ಷಣಾ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ ಚಾಲನೆ ನೀಡಿದರು. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನಕುಮಾರ್ ಜಿ. ಎಸ್., ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎನ್. ಭಾರತಿ ಇದ್ದರು.
ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ನೇರಪ್ರಸಾರ ಕಾರ್ಯಕ್ರಮ ವೀಕ್ಷಿಸಿದರು.