ಕುಂದಾಪುರ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪಡುಕೋಣೆ ಎಂಬಲ್ಲಿ ಗುರುವಾರ ನಡೆದಿದೆ. ಪಡುಕೋಣೆ ನಿವಾಸಿಯ ಪ್ರಶಾಂತ್ ಎಂಬುವವರ ಪುತ್ರಿ ಸಿಂಧು (16) ಎಂದು ತಿಳಿದುಬಂದಿದೆ.

Call us

Click Here

ಸೂಚನೆ: ಯಾವುದೇ ಸಮಸ್ಯೆಗೂ ಆತ್ಮಹತ್ಯೆ ಪರಿಹಾರವಲ್ಲ. ಏನೇ ಸಮಸ್ಯೆ, ತೊಂದರೆಗಳಿದ್ದರೂ ನಿಮ್ಮ ಪೋಷಕರು ಅಥವಾ ಆಪ್ತ ಸಮಾಲೋಚಕರ ಬಳಿ ಹೇಳಿಕೊಳ್ಳಿ.

ಕುಂದಾಪುರದ ವಡೇರಹೋಬಳಿಯಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದ ಸಿಂಧು, ಸಮೀಪದ ಸರಕಾರಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದಳು.

ಕಳೆದೆರಡು ದಿನಗಳ ಹಿಂದೆ ಅನಾರೋಗ್ಯದ ಕಾರಣಕ್ಕೆ ಶಾಲೆಗೆ ಎರಳಗೆ ತನ್ನ ಮನೆಗೆ ತೆರಳಿದ್ದ ಸಿಂಧುವನ್ನು ಬುಧವಾರ ತಾಯಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಗುರುವಾರ ತಂದೆ ಕುಂದಾಪುರಕ್ಕೆ ಬಿಡುವುದಾಗಿ ಹೇಳಿದ್ದರು. ಆದರೆ ಆಕೆ ತಾನು ಬಸ್ಸಿನಲ್ಲಿ ಹೋಗುವುದಾಗಿ ತಿಳಿಸಿದ್ದಳು. ಇದಾದ ಸ್ವಲ್ಪ ಸಮಯದ ನಂತರ ಮನೆಯವರು ಗಮನಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಸಿಂಧು ಮೃತದೇಹ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಗಂಗೊಳ್ಳಿ ಪಿಎಸ್ಐ ಹರೀಶ್ ಆರ್.ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Click here

Click here

Click here

Click Here

Call us

Call us

Leave a Reply