Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಖಂಬದಕೋಣೆ ರೈ.ಸೇ.ಸ. ಸಂಘದ ಮಹಾಸಭೆ: ರೂ. 5.07 ಕೋಟಿ ಲಾಭ, ಸದಸ್ಯರಿಗೆ 15% ಡಿವಿಡೆಂಟ್
    ಊರ್ಮನೆ ಸಮಾಚಾರ

    ಖಂಬದಕೋಣೆ ರೈ.ಸೇ.ಸ. ಸಂಘದ ಮಹಾಸಭೆ: ರೂ. 5.07 ಕೋಟಿ ಲಾಭ, ಸದಸ್ಯರಿಗೆ 15% ಡಿವಿಡೆಂಟ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ 46ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಭಾನುವಾರ ಜರುಗಿತು.

    Click Here

    Call us

    Click Here

    ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು 46 ವರ್ಷಗಳುದ್ದಕ್ಕೆ ಏರುಗತಿಯ ಪ್ರಗತಿಯನ್ನು ದಾಖಲಿಸುತ್ತ ಬಂದಿದೆ. ವರದಿ ವರ್ಷದಲ್ಲಿ ರೂ.1015 ಕೋಟಿ ವ್ಯವಹಾರ ನಡೆಸಿ, ರೂ 5.07 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ. ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ಉತ್ತಮ ಪ್ರಗತಿ ಸಾಧಿಸಿದೆ ಎಂದು ಹೇಳಿದರು.

    ಸಂಘವು ವರ್ಷದಲ್ಲಿ ರೂ. 219.17 ಕೋಟಿ ಠೇವಣಿ ಸಂಗ್ರಹಿಸಿ, ರೂ. 177.66 ಕೋಟಿ ಸಾಲ ನೀಡಿದೆ. ವಿವಿಧ ಸಂಸ್ಥೆಗಳಲ್ಲಿ ರೂ. 91.21 ಕೋಟಿ ಹೂಡಿಕೆ ಮಾಡಿದೆ. ರೂ.27.98 ಕೋಟಿ ನಿಧಿಗಳು, ರೂ.2.41 ಕೋಟಿ ಪಾಲು ಬಂಡವಾಳ ಹೊಂದಿದೆ. ರೂ.16.88 ಕೋಟಿ ಕೃಷಿ ಸಾಲ, 18.96 ಕೋಟಿ ರೈತ ಸಿರಿ ಸ್ವ-ಸಹಾಯ ಗುಂಪುಗಳ ಸಾಲ ನೀಡಲಾಗಿದೆ ಎಂದರು.

    ಸಂಘದಲ್ಲಿ 8100ಕ್ಕೂ ಮಿಕ್ಕಿ ಸದಸ್ಯರನ್ನೊಳಗೊಂಡ ಸ್ವಸಹಾಯ ಗುಂಪುಗಳನ್ನು ರಚನೆ ಮಾಡಲಾಗಿದ್ದು, ಅವಶ್ಯಕತೆಗನುಗುಣವಾಗಿ ಸಾಲ ಸೌಲಭ್ಯ, ಗಂಪುಗಳ ಅಭಿವೃದ್ಧಿ ಪ್ರಗತಿಗಾಗಿ ಸದಸ್ಯರಿಗೆ ಉದ್ಯೋಗ ಮಾಹಿತಿ, ಗುತ್ತಿಗೆ ಆಧಾರದಲ್ಲಿ 13 ಮಂದಿ ರೈತಸಿರಿ ಪ್ರತಿನಿಧಿಗಳನ್ನು ನೇಮಿಸಿಕೊಳ್ಳಲಾಗಿದೆ. 900ಕ್ಕೂ ಮಿಕ್ಕಿ ಸದಸ್ಯರನ್ನೊಳಗೊಂಡ ರೈತ ಕೂಟವನ್ನು ರಚಿಸಲಾಗಿದ್ದು, ಪ್ರತಿ ತಿಂಗಳ ಕೊನೆಯ ಶನಿವಾರ ಮಾಸಿಕ ಸಭೆ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಶಿಬಿರ ಆಯೋಜಿಸಲಾಗುತ್ತಿದೆ ಎಂದರು.

    ಸಂಘದ ಉಪಾಧ್ಯಕ್ಷ ಈಶ್ವರ ಹಕ್ಲತೋಡ್, ನಿರ್ದೇಶಕರಾದ ಬಿ. ರಘುರಾಮ ಶೆಟ್ಟಿ, ಕೆ. ಮೋಹನ ಪೂಜಾರಿ, ಬಿ. ಎಸ್. ಸುರೇಶ ಶೆಟ್ಟಿ, ಗುರುರಾಜ್ ಹೆಬ್ಬಾರ್, ವೀರೇಂದ್ರ ಶೆಟ್ಟಿ, ಮಂಜು ದೇವಾಡಿಗ, ನಾಗರಾಜ ಖಾರ್ವಿ, ಭರತ್ ದೇವಾಡಿಗ, ಹೂವ ನಾಯ್ಕ್, ದಿನಿತಾ ಶೆಟ್ಟಿ, ಜಲಜಾಕ್ಷಿ ಪೂಜಾರಿ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್. ಪೈ ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ಪ್ರಬಂಧಕ ಚಂದಯ್ಯ ಶೆಟ್ಟಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026

    ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ

    06/07/2026

    ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ

    06/07/2026
    Leave A Reply Cancel Reply

    2 × four =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.