ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆ, ಸದಸ್ಯರಿಗೆ ಶೇ.14 ಡಿವಿಡೆಂಡ್ ಘೋಷಣೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಸೆ.12:
ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆಯು ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಇಂದು ನಡೆಯಿತು.

Call us

Click Here

ಮಹಾಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಮಾತನಾಡಿ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ಹಿಂದಿನ ಸಾಲಿನಲ್ಲಿ ರೂ 312 ಕೋಟಿಗೂ ಮಿಕ್ಕಿದ ವ್ಯವಹಾರ ನಡೆಸಿ, ರೂ. 1.25 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 14 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ. ಸಂಘವು ಹಿಂದಿನ ಸಾಲಿನಲ್ಲಿ ರೂ 58.70 ಕೋಟಿ ಠೇವಣಿ ಹೊಂದಿ, ಸದಸ್ಯರಿಗೆ ರೂ. 43.82 ಕೋಟಿ ಸಾಲ ನೀಡಿದೆ. ಅದರಲ್ಲಿ ರೂ. 10 ಕೋಟಿಗೂ ಮಿಕ್ಕಿ ಕೃಷಿ ಸಾಲವನ್ನು ಸಂಘವು ಸದಸ್ಯರಿಗೆ ನೀಡಲಾಗಿದೆ. ವಿವಿಧ ನಿಧಿಗಳಲ್ಲಿ 45.71 ಕೋಟಿ ರೂ. ಸಂಚಯಿಸಲಾಗಿದೆ ಎಂದರು.

ಸಂಸ್ಥೆಯ ನಿರಂತರವಾಗಿ ಪ್ರಗತಿಯ ಪಥದಲ್ಲಿದ್ದು ಸದಸ್ಯರಿಗೂ ಬಡ್ಡಿಯಲ್ಲಿ ಕಡಿತ, ಕೃಷಿ ಹಾಗೂ ಹೈನುಗಾರಿಕೆಗೆ ಸಾಲ ನೀಡಿ ಪ್ರೋತ್ಸಾಹ ನೀಡುತ್ತಾ ಬರಲಾಗುತ್ತಿದೆ. ವಿವಿಧ ಮಾಹಿತಿ ಕಾರ್ಯಕ್ರಮಗಳು, ಆರೋಗ್ಯ ಶಿಬಿರ, ವಿದ್ಯಾಭ್ಯಾಸದಲ್ಲಿ ಸಾಧನೆಗೈದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಸಂಸ್ಥೆಯ ಮೂಲಕ ಕೈಗೊಳ್ಳಲಾಗಿದೆ. ಸಂಘದ ನಿರ್ದೇಶಕರು, ಸಿಬ್ಬಂದಿಗಳು ಹಾಗೂ ಸದಸ್ಯರ ಸಹಕಾರದಿಂದ ಸಂಸ್ಥೆಯು ಉತ್ತಮ ಪ್ರಗತಿ ಸಾಧಿಸಿದ್ದು, ಪ್ರಧಾನ ಕಛೇರಿ ಸೇರಿದಂತೆ ಎಲ್ಲಾ ಶಾಖೆಗಳೂ ಸ್ವಂತ ನಿವೇಶನ, ಕಟ್ಟಡ ಹಾಗೂ ಗೋದಾಮು ಹೊಂದಿದ್ದು, ಪ್ರಧಾನ ಕಟ್ಟಡ ವಿಸ್ತರಣೆ ಮಾಡಲಾಗುತ್ತಿದೆ. ಹೆಚ್ಚಿನ ನ್ಯಾಯಬೆಲೆ ಅಂಗಡಿಗೆ ತೆರೆಯಲು ಬೇಡಿಕೆ ಇದ್ದು ಸರಕಾರದ ನಿದೇರ್ಶನದ ಬಳಿಕ ತೆರೆಯಲಾಗುವುದು ಎಂದರು.

ಉಪಾಧ್ಯಕ್ಷ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ವಾಸು ಪೂಜಾರಿ, ಭೋಜ ನಾಯ್ಕ್, ಜಗದೀಶ ಪಿ. ಪೂಜಾರಿ, ನರಸಿಂಹ ದೇವಾಡಿಗ, ರಾಮೃಷ್ಣ ಖಾರ್ವಿ, ಪ್ರಕಾಶ ದೇವಾಡಿಗ, ಎಂ. ಅಣ್ಣಪ್ಪ ಬಿಲ್ಲವ, ನಾರಾಯಣ ಶೆಟ್ಟಿ, ರಾಮ, ನಾಗಮ್ಮ, ಸರೋಜಾ ಆರ್. ಗಾಣಿಗ, ಎಂ. ವಿನಾಯಕ ರಾವ್ ಉಪಸ್ಥಿತರಿದ್ದರು.

ಈ ಸಂದರ್ಭ ನೂತನ ಬಡಾಕೆರೆ ಶಾಖೆಯಲ್ಲಿ ಉತ್ತಮ ಠೇವಣಿ ಹಾಗೂ ಸಾಲ ವಸೂಲಾತಿ ಮಾಡಿದ ಶಾಖಾ ಪ್ರಬಂಧಕ ರತ್ನಾಕರ ಬಿಲ್ಲವ ಅವರನ್ನು ಗೌರವಿಸಲಾಯಿತು. ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಸಂಘದ ವ್ಯಾಪ್ತಿಯ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹಧನ, ಇಂಜಿನಿಯರಿಂಗ್ ಕಲಿಯುವ ವಿದ್ಯಾರ್ಥಿಗಳಿಗೆ ಧನಸಹಾಯ ವಿತರಿಸಲಾಯಿತು.

Click here

Click here

Click here

Click Here

Call us

Call us

ಸಂಘದ ಸದಸ್ಯರು ಪ್ರಾರ್ಥಿಸಿದರು. ನಿರ್ದೇಶಕ ಎಂ. ವಿನಾಯಕ ರಾವ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ವರದಿ, ಆಯವ್ಯಯ ವಿವರ ನೀಡಿದರು. ಮರವಂತೆ ಶಾಖಾ ವ್ಯವಸ್ಥಾಪಕ ಸೋಮಯ್ಯ ಬಿಲ್ಲವ ನಿರೂಪಿಸಿದರು.

Leave a Reply