ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವಲಯ ಮತ್ತು ಸರಕಾರಿ ಪ್ರೌಢಶಾಲೆ ತಲ್ಲೂರು ಇವರ ಸಹಯೋಗದಲ್ಲಿ ತಲ್ಲೂರಿನಲ್ಲಿ ಜರುಗಿದ ಜಿಲ್ಲಾ ಮಟ್ಟದ 17 ವರ್ಷದ ಒಳಗಿನ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಪ್ರೌಢ ಶಾಲೆ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.
ಶಾಲೆಯ ವಿದ್ಯಾರ್ಥಿಗಳಾದ ತರುಣ್ ಕಾರ್ವಿ, ಯೋಗೇಶ್, ಪ್ರೀತೇಶ್, ಮೌನೇಶ್, ಗೌತಮ್, ಧನು?, ಶೈಲೇಶ್, ದಿಶಾನ್, ಕಾರ್ತಿಕ್, ನಿಶಾಂತ್ ಹಾಗೂ ಧರಣೇಶ್ ಶಾಲೆಯ ತಂಡದಲ್ಲಿದ್ದರು. ಗಂಗೊಳ್ಳಿಯ ಸಂತ ಜೋಸೆಫ್ ಶಾಲೆಯ ದೈಹಿಕ ಶಿಕ್ಷಕ ಅಣ್ಣಪ್ಪ ಶೆಟ್ಟಿ ಮಾರ್ಗದರ್ಶನದಲ್ಲಿ, ಕಾರ್ತಿಕ್ ಖಾರ್ವಿ, ಹಿತೇಶ್ ಖಾರ್ವಿ ಮತ್ತು ಪ್ರಜ್ವಲ್ ಪಂಡಿತ್ ಶಾಲೆಯ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು. ಶಾಲೆಯ ಮುಖ್ಯೋಪಾಧ್ಯಾಯನಿ ಸಿ. ಕ್ರೆಸೆನ್ಸ್, ಶಿಕ್ಷಕರು, ಶಿಕ್ಷಕೇತರರು ಮತ್ತು ಹಳೆ ವಿದ್ಯಾರ್ಥಿಗಳ ವಿಜೇತ ತಂಡದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.