ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ಸಭಾಭವನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಗಣೇಶೋತ್ಸವ ಸುವರ್ಣ ಮಹೋತ್ಸವ ಸಮಿತಿಯ ವತಿಯಿಂದ ಸುವರ್ಣ ಸಂಭ್ರಮದ ಅಂಗವಾಗಿ ಉಡುಪಿ ಜಿಲ್ಲಾ ಮಟ್ಟದ ಗಣಪತಿ ಚಿತ್ರ ಬಿಡಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.
ಉಪತಹಸೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯನಿರ್ವಹಣಾದಿಕಾರಿಯಾದ ಭೀಮಪ್ಪ ಎಚ್ ಬಿಲ್ಲಾರ್ ಉದ್ಗಾಟಿಸಿದರು.
ಈ ಸಂಧರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅದ್ಯಕ್ಷರಾದ ಸಂದೇಶ್ ಭಟ್, ಚಿತ್ರ ಕಲಾವಿದರಾದ ಮಂಜುನಾಥ ಮಯ್ಯ,ಶಿಕ್ಷಕರಾದ ಗಣೇಶ್ ಪೂಜಾರಿ,ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಉಪಾಧ್ಯಕ್ಷರಾದ ರಾಮದೇವಾಡಿಗ,ಉದ್ಯಮಿ ಸದಾಶಿವ ಗಾಣಿಗ ಸುವರ್ಣ ಮಹೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ವಿ.ಎಚ್.ನಾಯಕ್ ಮೊದಲಾದವರು ಉಪಸ್ಥಿತರಿದ್ದರು
ಪ್ರಧಾನ ಸಂಚಾಲಕರಾದ ಪುರುಷೋತ್ತಮದಾಸ್ ಕಾರ್ಯಕ್ರಮ ನಿರೂಪಿಸಿದರು. ಅನಿಲ್ ದೇವಾಡಿಗ ಸ್ವಾಗತಿಸಿ ಮಂಜುನಾಥ್ ದೇವಾಡಿಗ ಧನ್ಯವಾದಗೈದರು