ಸೈಮಾ ಅವಾರ್ಡ್ಸ್ – ಕಾಂತಾರ ಸಿನಿಮಾಕ್ಕೆ10 ಪ್ರಶಸ್ತಿ: ಸಂತಸ ಹಂಚಿಕೊಂಡ ನಟ, ನಿರ್ದೇಶಕ ರಿಷಬ್ ಶೆಟ್ಟಿ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸೈಮಾ ಅವಾರ್ಡ್ಸ್ – ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2022ನೇ ಸಾಲಿನಲ್ಲಿ ಬ್ಲಾಕ್ ಬಸ್ಟರ್ ಹಿಟ್ ನೀಡಿದ ಕಾಂತಾರ ಸಿನಿಮಾಗೆ ಹಲವು ವಿಭಾಗದಲ್ಲಿ ಪ್ರಶಸ್ತಿಗಳು ಹರಿದುಬಂದಿದೆ.

Call us

Click Here

ಕಾಂತಾರ ಸಿನಿಮಾಕ್ಕಾಗಿ ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ ನಿರ್ದೇಶನ, ಪಾಥ್ ಬ್ರೇಕಿಂಗ್ ಸ್ಟೋರಿ ಹಾಗು ಅತ್ಯುತ್ತಮ ನಟ, ಸಪ್ತಮಿ ಗೌಡ ಅವರಿಗೆ ಅತ್ಯುತ್ತಮ ನಟಿ, ಅಚ್ಚುತ ಕುಮಾರ್ ಅವರಿಗೆ ಖಳನಟ, ಪ್ರಕಾಶ್ ತುಮಿನಾಡು ಅವರಿಗೆ ಅತ್ಯುತ್ತಮ ಹಾಸ್ಯನಟ, ಅಜನೀಶ್ ಬಿ. ಲೋಕನಾಥ್ ಅವರಿಗೆ ಅತ್ಯುತ್ತಮ ಸಂಗೀತ ನಿರ್ದೇಶಕ, ವಿಜಯ ಪ್ರಕಾಶ್ ಅವರಿಗೆ ಅತ್ಯುತ್ತಮ ಗಾಯಕ ಹಾಗೂ ಪ್ರಮೋದ್ ಮರವಂತೆ ಅವರಿಗೆ ಅತ್ಯುತ್ತಮ ಸಾಹಿತಿ, ಮುಕೇಶ್ ಲಕ್ಷ್ಮಣ್ ಅವರಿಗೆ ವಿಶೇಷ ಮೆಚ್ಚುಗೆ ಪ್ರಶಸ್ತಿ ದೊರೆತಿದೆ.

2022ರ ಸೆಪ್ಟೆಂಬರ್ 30ರಂದು ಬಿಡುಗಡೆ ಆದ ಕಾಂತಾರ ಸಿನಿಮಾದಲ್ಲಿನ ರಿಷಬ್ ಶೆಟ್ಟಿ ಅವರ ನಟನೆಗೆ ಫಿದಾ ಆಗಿದ್ದರು. ಅದರಲ್ಲೂ ಕ್ಲೈಮ್ಯಾಕ್ಸ್ ದೃಶ್ಯ ಹೆಚ್ಚು ಗಮನ ಸೆಳೆದಿತ್ತು. ಕರಾವಳಿಯ ಸಂಸ್ಕೃತಿ ಮತ್ತು ಆಚರಣೆಗಳ ಬಗ್ಗೆ ‘ಕಾಂತಾರ’ ಸಿನಿಮಾದಲ್ಲಿ ತೋರಿಸಲಾಗಿತ್ತು. ಬೇರೆ ಭಾಷೆಗಳಿಗೆ ಡಬ್ ಆಗಿ ತೆರೆಕಂಡು ಹಲವು ರಾಜ್ಯಗಳಲ್ಲಿ ಈ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಂಡಿತ್ತು. ಬಾಲಿವುಡ್ ಮಟ್ಟದಲ್ಲಿ ರಿಷಬ್ ಶೆಟ್ಟಿ ಅವರಿಗೆ ಜನಪ್ರಿಯತೆ ಸಿಕ್ಕಿತು. ‘ಹೊಂಬಾಳೆ ಫಿಲ್ಮ್ಸ್ ಸಂಸ್ಥೆಗೆ ಭರ್ಜರಿ ಲಾಭ ಆಯಿತು. ಈಗ ‘ಕಾಂತಾರ 2’ ಸಿನಿಮಾಗೆ ಸಿದ್ಧತೆಗಳು ನಡೆಯುತ್ತಿವೆ.

ಜನರ ಮನ್ನಣೆಯಿಂದ ಸಿಕ್ಕ ಪ್ರೀತಿಯೇ, ಕಾಂತಾರದ ಯಶಸ್ಸಿಗೆ ಕಾರಣ. ಮನ ತುಂಬಿ ಬಂದಿದೆ, ಜವಾಬ್ದಾರಿ ಹೆಚ್ಚಿಸಿದೆ. ನಿಮ್ಮ ಪ್ರೀತಿ, ಆಶೀರ್ವಾದ ಹೀಗೇ ಇರಲಿ. ಈ ಎಲ್ಲಾ ಯಶಸ್ಸನ್ನು ದೈವ ನರ್ತಕರು, ಅಪ್ಪು ಸರ್ ಹಾಗೂ ಕನ್ನಡಿಗರಿಗೆ ಸಮರ್ಪಣೆ – ರಿಷಬ್ ಶೆಟ್ಟಿ ನಟ, ನಿರ್ದೇಶಕ

Leave a Reply

Your email address will not be published. Required fields are marked *

five × three =