ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯನವರ ಹುಟ್ಟು ಹಬ್ಬದ ಪ್ರಯುಕ್ತ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘ ವತಿಯಿಂದ ಆಚರಿಸಲಾಯಿತು.
ಮೆಸ್ಕಾಂ ಇಂಜಿನಿಯರ್ ಭರತ್ ರಾಜ್ ಶೆಟ್ಟಿ ಜಾಂಬೂರು ಅವರನ್ನು ಸಂಘದ ಕಚೇರಿಯಲ್ಲಿ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಶಾಲು ಹೊದಿಸಿ ಸನ್ಮಾನಿಸುವ ಮೂಲಕ ಆಚರಿಸಿದರು.
ಸನ್ಮಾನ ಸ್ವೀಕರಿಸಿದ ಭರತ್ ರಾಜ್ ಶೆಟ್ಟಿ ರಾಷ್ಟ್ರೀಯ ಅಭಿಯಂತರದ ದಿನಾಚರಣೆಯ ಪ್ರಸ್ತುತತೆಯ ಬಗ್ಗೆ ಮಾತನಾಡಿ, ಇಂದು ತನ್ನನ್ನ ಗುರುತಿಸಿ ಅಭಿನಂದಿಸಿದ ಸಂಘಕ್ಕೆ ಕೃತಜ್ಞತೆಗಳನ್ನು ಅರ್ಪಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ನಿತೀಶ್ ಶೆಟ್ಟಿ ಬಸ್ರೂರು, ಶ್ರೀ ರವಿಶಂಕರ ಹೆಗ್ಡೆ , ಚೇತನ್ ಶೆಟ್ಟಿ ಕೋವಾಡಿ, ಉದಯ್ ಶೆಟ್ಟಿ ಮಚ್ಚಟ್ಟು, ಸುಕುಮಾರ ಶೆಟ್ಟಿ ಹೇರಿಕುದ್ರು, ಮುರಳೀಧರ ಶೆಟ್ಟಿ ಹುಯ್ಯಾರು, ಗುರುಪ್ರಸಾದ್ ಶೆಟ್ಟಿ ಹಾಲಾಡಿ, ರಾಜೀವ ಶೆಟ್ಟಿ ಹೆಂಗವಳ್ಳಿ ಉಪಸ್ಥಿತರಿದ್ದರು.
ಸಂದೇಶ ಶೆಟ್ಟಿ ಸರ್ವರನ್ನು ಸ್ವಾಗತಿಸಿ, ಸಂಘದ ಕೋಶಾಧಿಕಾರಿ ಅಕ್ಷಯ ಹೆಗ್ಡೆ ಮೊಳಹಳ್ಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.