ಕಾರ್ಕಳ ಕ್ರಿಯೇಟಿವ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಗಣೇಶೋತ್ಸವ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕಾರ್ಕಳ:
ಹಿರ್ಗಾನದಲ್ಲಿರುವ ಕ್ರಿಯೇಟಿವ್ ವಿದ್ಯಾಸಂಸ್ಥೆಯಲ್ಲಿ ಗಣೇಶ ಚಥುರ್ತಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಮುಂಜಾನೆ ಕಾರ್ಕಳದ ಎಣ್ಣೆಹೊಳೆಯಿಂದ ತೆರೆದ ವಾಹನದಲ್ಲಿ ಗಣೇಶನ ಮೂರ್ತಿಯನ್ನು ಕಾಲೇಜಿಗೆ ಮೆರವಣಿಗೆ ಮುಖಾಂತರ ಕರೆತರಲಾಯಿತು. ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ವಿಶೇಷವಾಗಿ ಗಣಹೋಮ, ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮಗಳು ನಡೆದವು. ಕನ್ನಡ ಉಪನ್ಯಾಸಕ ರಾಮಕೃಷ್ಣ ಹೆಗಡೆ ಗಣೇಶ ಚತುರ್ಥಿಯ ಮಹತ್ವದ ಕುರಿತು ಮಾತನಾಡಿದರು.

Call us

Click Here

ತದನಂತರ ಶ್ರೀ ದೇವಿ ಬಯಲಾಟ ಸಮಿತಿ ರಂಗನಪಲ್ಕೆ ತಂಡದಿಂದ ಅಸಹಾಯಕ ಬಡರೋಗಿಗಳ ಸಹಾಯಾರ್ಥ ಹುಲಿಕುಣಿತ ಪ್ರದರ್ಶನ ನಡೆಯಿತು. ಮಧ್ಯಾಹ್ನ ಮಹಾಪೂಜೆ ಮತ್ತು ಸಾಯಂಕಾಲ ರುದ್ರಶಿವ ಮೂಡಬಿದ್ರೆ ತಂಡದಿಂದ ನಾಸಿಕ್ ಬ್ಯಾಂಡ್ ಹಾಗೂ ಸಾಯಂಕಾಲ 4.30 ಗಂಟೆಗೆ ದುರ್ಗಾಪರಮೇಶ್ವರಿ ಜೋಡುರಸ್ತೆ ಇವರಿಂದ ಹುಲಿಕುಣಿತ ನಡೆಯಿತು. ಸಂಜೆ ಗಣೇಶ ಮೂರ್ತಿಯನ್ನು ಮೆರವಣಿಗೆಯಲ್ಲಿ ಕುಕ್ಕುದಕಟ್ಟೆಯವರೆಗೆ ಕರೆದೊಯ್ದು ಹತ್ತಿರದ ನದಿಯಲ್ಲಿ ಜಲಸ್ಥಂಬನಗೊಳಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ, ಅಶ್ವತ್ ಎಸ್.ಎಲ್, ಆದರ್ಶ ಎಂ.ಕೆ. ಅಮೃತ್ ರೈ ಉಪಸ್ಥಿತರಿದ್ದರು.

ಉಪನ್ಯಾಸಕ ರಾಜೇಶ್ ಶೆಟ್ಟಿ ಮತ್ತು ಸುನೀಲ್ ಶೆಟ್ಟಿ ಕಾರ್ಯಕ್ರಮವನ್ನು ಸಂಯೋಜಿಸಿದರು. ನರೇಶ್ ಹಾಗೂ ಪ್ರವೀಣ್ ಸಹಕರಿಸಿದರು.

Leave a Reply