ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಮಕ್ಕಳು ಕ್ರೀಡೆಯಿಂದ ದೂರ ಸರಿಯಬಾರದು. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರಬೇಕು. ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಕ್ಷಮತೆ ಹೆಚ್ಚುತ್ತದೆ ಮತ್ತು ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದೆ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಹೇಳಿದರು.

Call us

Click Here

ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸ.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿ ಪೂರ್ವ ಕಾಲೇಜಿನ ವಠಾರದಲ್ಲಿ ಗುರುವಾರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟಿಸಿ ಅವರು ಮಾತನಾಡಿದರು.

ಗಂಗೊಳ್ಳಿ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಸದಸ್ಯ ಕೆ.ರಾಮನಾಥ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಎಂ.ನಾಗೇಂದ್ರ ಪೈ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿಜಯ ಕುಮಾರ್, ಕುಂದಾಪುರ ತಾಲೂಕು ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಬೈಂದೂರು ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ, ಗಂಗೊಳ್ಳಿ ಗ್ರಾಪಂ ಸದಸ್ಯ ಬಿ.ರಾಘವೇಂದ್ರ ಪೈ, ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಉಪಾಧ್ಯಕ್ಷ ಜಿ.ವಿಠಲ ಶೆಣೈ, ಎಸ್.ವಿ. ಕನ್ನಡ ಮಾಧ್ಯಮ ಶಾಲೆಯ ಉಪಪ್ರಾಂಶುಪಾಲ ಉಮೇಶ ಕರ್ಣಿಕ್, ಎಸ್.ವಿ.ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ನಾಗರಾಜ ಶೆಟ್ಟಿ ಉಪಸ್ಥಿತರಿದ್ದರು.

ಸ.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಸ್ವಾಗತಿಸಿದರು. ಕುಂದಾಪುರ ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯ್ಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಸುಜಾತಾ ಕಾರ್ಯಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸೂರಜ್ ಸಾರಂಗ್ ವಂದಿಸಿದರು.

Leave a Reply