ಹೆನ್ನಾಬೈಲ್: ಸಂಭ್ರಮದ ಈದ್ ಮಿಲಾದ್, ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜನ್ಮದಿನಾಚರಣೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1495 ಜನ್ಮದಿನಾಚರಣೆ ಈದ್ ಮಿಲಾದನ್ನು ಹೆನ್ನಾಬೈಲ್ ಮಸೀದಿ ಆವರಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

Call us

Click Here

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಕುಂದಾಪುರ ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಚೋನಾಳಿಯವರು” ಪ್ರವಾದಿ ಮುಹಮ್ಮದರ ಚಿಂತನೆಗಳು ಸಾರ್ವಕಾಲಿಕ ಅನ್ವಯವಾಗುವಂತದ್ದು. ಅವರ ಚರಿತ್ರೆಯನ್ನು ಓದಿದರೆ ಅವರು ಲೋಕದ ಪಾಲಿನ ಅನುಗ್ರಹ ಎಂಬ ದೈವೀಕ ವಾಣಿ ಸತ್ಯವೆನಿಸುತ್ತದೆ. ಹಿಂದೂ ಮುಸ್ಲಿಮರು ಒಂದಾಗಿ ಬದುಕಿದಾಗಲೇ ದೇಶ ತಲುಪಬೇಕಾದ ಎತ್ತರವನ್ನು ತಲುಪುತ್ತದೆ. ವಿಶ್ವದ ಅತ್ಯಂತ ದೊಡ್ಡ ಸಮುದಾಯಗಳು ಎಲ್ಲ ಭಿನ್ನತೆಗಳನ್ನು ಮರೆತು ಒಂದಾಗುವುದು ಅಸಾಧ್ಯವೇನಲ್ಲ. ಆದರೆ ಅದಕ್ಕೆ ಪ್ರಬುದ್ಧ ಚಿಂತಕರ ಸಮೂಹ ಬೇಕಿದೆ. ಪ್ರವಾದಿ ಮುಹಮ್ಮದರು ಸೇರಿದಂತೆ ಎಲ್ಲ ಕಾಲದಲ್ಲೂ ಬಂದ ದೇವದೂತರು, ದಾರ್ಶನಿಕರು, ಋಷಿ ಮುನಿಗಳ ಬದುಕು ಮತ್ತು ಸಂದೇಶಗಳ ಅಧ್ಯಯನ ನಿಷ್ಪಕ್ಷಪಾತವಾಗಿ ನಡೆದರೆ ಸಮಾಜ ಪ್ರಬುದ್ಧವಾಗಿ ಉನ್ನತ ಚಿಂತನೆಯು ಖಂಡಿತ ಮೂಡಿ ಸಾಮಾಜಿಕ ಸೌಹಾರ್ದ ನೆಲೆಯಾಗುತ್ತದೆ. ಸೌಹಾರ್ದದ ತುಡಿತ ಕಾಲದ ಅಗತ್ಯ. ಸೌಹಾರ್ದವಿಲ್ಲದ ಸಮಾಜ ಸರಾಗವಾಗಿ ಉಸಿರಾಡಿದ ಉದಾಹರಣೆ ಕಾಲಾತೀತ, ದೇಶಾತೀತ, ಧರ್ಮಾತೀತವಾಗಿ ಇಲ್ಲವೆಂದೇ ಹೇಳಬಹುದು ಎಂದರು.

ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಇದರ ಮುಖ್ಯ ಸಲಹೆಗಾರರಾದ ಇಬ್ರಾಹಿಮ್ ಸಾಹೇಬ್ ಕೋಟ, ಶ್ರೀ ಕ್ಷೇತ್ರ ಕಮಲಶಿಲೆ ದೇವಸ್ಥಾನದ ಮೊಕ್ತೇಸರರಾದ ಚಂದ್ರಶೇಖರ್ ಶೆಟ್ಟಿ ಹೆನ್ನಾಬೈಲ್ ಅತಿಥಿಗಳಾಗಿದ್ದರು. ಮಸೀದಿಯ ಆಡಳಿತ ಮಂಡಳಿ ಅಧ್ಯಕ್ಷ ಹಸನ್ ಸಾಹೇಬ್, ಮಿಲಾದ್ ಕಮಿಟಿ ಅಧ್ಯಕ್ಷ ಸೈಯದ್ ರಫೀಕ್ , ಕಾರ್ಯದರ್ಶಿ ಆಸೀಫ್ ಸಾಹೇಬ್ ಉಪಸ್ಥಿತರಿದ್ದರು.

ತೌಸೀಫ್ ಇಬ್ರಾಹಿಮ್ ಸ್ವಾಗತಿಸಿದರು. ಮುಷ್ತಾಕ್ ಹೆನ್ನಾಬೈಲ್ ನಿರೂಪಿಸಿದರು.

Leave a Reply