ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯ ಕಟ್ಟಡ ಸಾಮಾಗ್ರಿ ಸಾಗಾಟದ ಲಾರಿಗಳಿಗೆ ಜಿ ಪಿ ಎಸ್ ಅಳವಡಿಕೆಗೆ ಅಕ್ಟೋಬರ್ 7 ರವೆರೆಗೆ ಕಾಲಾವಕಾಶ ನೀಡಲು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಉಡುಪಿ ಜಿಲ್ಲೆಯ ಐದು ಮಂದಿ ಶಾಸಕರು ಮತ್ತು ಪ್ರತಿಭಟನಾ ನಿರತ ಲಾರಿ ಮಾಲಕರ ಪ್ರತಿನಿಧಿಗಳ ಜೊತೆ ಗುರುವಾರ ಸಂಜೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಿತು.
ಈ ಸಂಧರ್ಭದಲ್ಲಿ ಉಡುಪಿ ಜಿಲ್ಲೆಯ ಲಾರಿ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಕಳೆದ ಎರಡು ದಿನಗಳಿಂದ ಕಟ್ಟಡ ಸಾಮಗ್ರಿ ಸಾಗಾಟ ಬಂದ್ ಮೂಲಕ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾಡಳಿತ ಮತ್ತು ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಲಾರಿ ಮಾಲೀಕರ ಸಮಸ್ಯೆ, ಕಟ್ಟಡ ಸಾಮಾಗ್ರಿ ಬಂದ್ ನಿಂದ ಬಡ ಕೂಲಿ ಕಾರ್ಮಿಕರ ಹಾಗೂ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಭೆಯಲ್ಲಿ ಜಿಲ್ಲಾಧಿಕಾರಿ ಡಾಕ್ಟರ್ ಕೆ. ವಿದ್ಯಾ ಕುಮಾರಿ, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಯಶ್ ಪಾಲ್ ಸುವರ್ಣ, ವಿ. ಸುನೀಲ್ ಕುಮಾರ್, ಸುರೇಶ್ ಶೆಟ್ಟಿ ಗುರ್ಮೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಗಣಿ ಹಾಗೂ ಭೂವಿಜ್ಞಾನ ಇಲಾಖೆ ಅಧಿಕಾರಿಗಳು, ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಲಾರಿ ಮಾಲೀಕರಿಗೆ ಕಟ್ಟಡ ಸಾಮಗ್ರಿ ಸಾಗಾಟ ವಾಹನಗಳಿಗೆ ಜಿ ಪಿ ಎಸ್ ಅಳವಡಿಕೆಗೆ ಅಕ್ಟೋಬರ್ 7 ರವೆರೆಗೆ ಕಾಲಾವಕಾಶ ನೀಡಲು ನಿರ್ಧರಿಸಲಾಯಿತು.