ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಗರದ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರೆಗಾರ್ ಎಂಬುವರಿಗೆ ಅಪರಿಚಿತನೊಬ್ಬ ಚೂರಿ ಇರಿದು ಪರಾರಿಯಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ. ಇರಿತಕ್ಕೊಳಗಾದ ರಾಘವೇಂದ್ರ ಗಂಭೀರ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂದಾಪುರದ ಚಿಕನ್ ಸಾಲ್ ರಸ್ತೆ ಅಂಚೆ ಕಚೇರಿ ಬಳಿಯ ನ್ಯೂ ಡೆಲ್ಲಿ ಬಜಾರ್ ಅಂಗಡಿಯೆದುರು ಬನ್ಸ್ ರಾಘು ಯಾನೆ ರಾಘವೇಂದ್ರ ತನ್ನ ಹೊಂಡಾ ಸಿಟಿ ಕಾರಿನಲ್ಲಿ ಬಂದಿದ್ದು, ಇದೇ ಸಂದರ್ಭ ವ್ಯಾಗನರ್ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ತಗಾದೆ ತೆಗೆದು ರಾಘವೇಂದ್ರ ತೊಡೆಗೆ ಚೂರಿ ಹಾಕಿ ಕಾರಿನಲ್ಲಿ ಪರಾರಿಯಾಗಿದ್ದಾನೆ. ಘಟನೆಗೆ ಹಳೆ ದ್ವೇಷವೇ ಕಾರಣವಿರಬಹುದು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ವೃತ್ತ ನಿರೀಕ್ಷಕ ನಂದಕುಮಾರ್, ಎಸ್‌ಐ ವಿನಯ್ ಕೊರ್ಲಹಳ್ಳಿ ಹಾಗೂ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಕುಂದಾಪುರ: ಚೂರಿ ಇರಿತಕ್ಕೆ ಒಳಗಾದ ವ್ಯಕ್ತಿ ಸಾವು – https://kundapraa.com/?p=69346 .