ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಗರದಲ್ಲಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಗಾಯಗೊಂಡಿದ್ದ ಇಲ್ಲಿನ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರಿಗಾರ್ (42) ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಬೆಳಗ್ಗೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಭಾನುವಾರ ಸಂಜೆ ಚಿಕ್ಕನಸಾಲು ರಸ್ತೆ ಬಳಿ ನಡೆದ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಕಾರು ಡ್ರೈವ್ ಮಾಡುತ್ತಿದ್ದ ರಾಘವೇಂದ್ರ ಹಾಗೂ ಎದುರಿನ ಕಾರಿನ ಡ್ರೈವರ್ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದೇ ವೇಳೆ ಎದುರಿನ ಕಾರಿನಲ್ಲಿದ್ದ ವ್ಯಕ್ತಿ ರಾಘವೇಂದ್ರ ಅವರಿಗೆ ಚೂರಿ ಇರಿದಿದ್ದರು. ಬಳಿಕ ಚೂರಿ ಇರಿತಕ್ಕೊಳಗಾದ ರಾಘು ಅವರ ತಕ್ಷಣ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಘಟನೆಗೆ ಪೂರ್ವ ದ್ವೇಷ ಕಾರಣ ಅನ್ನುವ ಮಾತುಗಳು ಕೇಳಿಬಂದಿದ್ದು ಈ ನಿಟ್ಟಿನಲ್ಲಿ ಆರೋಪಿ ಪತ್ತೆಗಾಗಿ ತನಿಕೆ ಹಾಗೂ ಡಿವೈಎಸ್‌ಪಿ ಅವರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ.










