ಜಿಲ್ಲೆಯಲ್ಲಿ ಮರಳು, ಕಲ್ಲು ಗಣಿ – ಸಾಗಾಟ ಸಮಸ್ಯೆ: ಅ.5ರಂದು ಮುಖ್ಯಮಂತ್ರಿಗಳ‌ ನೇತೃತ್ವದಲ್ಲಿ ಸಭೆ

Call us

Call us

Call us

ಕುಂದಾಪ್ರ ಡಾಟ್ ಕಾಂ‌ ಸುದ್ದಿ.
ಉಡುಪಿ,ಅ.5:
ಜಿಲ್ಲೆಯಲ್ಲಿ ಎದುರಾಗಿರುವ ಮರಳು, ಕೆಂಪು ಕಲ್ಲು ಗಣಿಗಾರಿಕೆ – ಸಾಗಾಟ ಹಾಗೂ ಇನ್ನಿತರೇ ಸಮಸ್ಯೆಗಳ ಬಗ್ಗೆ ಚರ್ಚಿಸಲು ಗುರುವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪಸ್ಥಿತಿಯಲ್ಲಿ ವಿಶೇಷ ಸಭೆ ಆಯೋಜಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ತಿಳಿಸಿದ್ದಾರೆ.

Call us

Click Here

ಗುರುವಾರ ಸಂಜೆ 5 ಗಂಟೆಗೆ ಬೆಂಗಳೂರಿನ ವಿಧಾನಸೌಧದ 3ನೇ ಮಹಡಿ ಕೊಠಡಿ ಸಂಖ್ಯೆ -313ರಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ‌ ಜಿಲ್ಲಾ ಉಸ್ತುವಾರಿ ಸಚಿವರು, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಉಡುಪಿ ಜಿಲ್ಲೆಯ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದ ಜಿಲ್ಲೆಯ ಉಭಯ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರನ್ನು ಸಭೆಗೆ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಮರಳು, ಕೆಂಪುಕಲ್ಲು, ಜಲ್ಲಿ ಹಾಗೂ ಇನ್ನಿತರ ಕಟ್ಟಡ ಸಾಮಾಗ್ರಿಗಳ ಅಕ್ರಮ ಸಾಗಾಟಕ್ಕೆ ತಡೆ ಬಿದ್ದ ಬೆನ್ನಲ್ಲೇ ಲಾರಿ ಚಾಲಕ ಮಾಲೀಕರು‌ ಜಿಲ್ಲಾದ್ಯಂತ ಪ್ರತಿಭಟನೆ ಕೈಗೊಂಡಿದ್ದಾರೆ. ಜಿಲ್ಲಾಡಳಿತ ಹಾಗೂ ಶಾಸಕರ ನೇತೃತ್ವದಲ್ಲಿ ಒಮ್ಮೆ ಸಭೆ ನಡೆಸಲಾಗಿದ್ದು ಜಿಪಿಎಸ್ ಅವಳವಡಿಕೆ ಬಳಿಕ‌ ಅನುಮತಿ ನೀಡುವ ಭರವಸೆ ನೀಡಲಾಗಿತ್ತು.

Leave a Reply