Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ. ಕಟ್ಟಡ ಸಾಮಾಗ್ರಿ ಪೂರೈಕೆ ಅನುಮತಿ ವಿಳಂಬವಾಗದಂತೆ ನೋಡಿಕೊಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ
    ಉಡುಪಿ ಜಿಲ್ಲೆ

    ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶವಿಲ್ಲ. ಕಟ್ಟಡ ಸಾಮಾಗ್ರಿ ಪೂರೈಕೆ ಅನುಮತಿ ವಿಳಂಬವಾಗದಂತೆ ನೋಡಿಕೊಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ

    Updated:06/10/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಡ್ ಕಾಂ‌ ಸುದ್ದಿ.
    ಬೆಂಗಳೂರು, ಅ.06:
    ಕಾನೂನು ಬಾಹಿರ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಆದರೆ ಕೆಂಪು ಕಲ್ಲು ಹಾಗೂ ಮಣ್ಣಿನ ವಿಚಾರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಕೂಡದು. ಮರಳು ಬ್ಲಾಕ್‌ಗೆ ಅನುಮತಿ‌ ಪತ್ರ ನೀಡುವ ಪ್ರಕ್ರಿಯೆಯನ್ನು ವಿಳಂಬಗೊಳಿಸಬಾರದು ಎಂದು ಮುಖ್ಯಮಂತ್ರಿ‌‌ ಸಿದ್ಧರಾಮಯ್ಯ ಸೂಚಿಸಿದ್ದಾರೆ.

    Click Here

    Call us

    Click Here

    ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಗುರುವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

    ರಾಜ್ಯ ಪರಿಸರ ಪ್ರಭಾವ ಮೌಲ್ಯ ಮಾಪನ ಪ್ರಾಧಿಕಾರ ಅನುಮತಿ ನೀಡಿದ ಬಳಿಕವೇ ಮರಳು ಬ್ಲಾಕ್ ಗಳಿಗೆ ಅನುಮತಿ ಪತ್ರ ದೊರೆಯುತ್ತದೆ. ಪ್ರಾಧಿಕಾರದ ತಿಂಗಳಿಗೊಮ್ಮೆ ಸಭೆ ನಡೆಯುವುದರಿಂದ ವಿಳಂಬವಾಗುತ್ತಿದೆ. ಈ ಪ್ರಕ್ರಿಯೆಗೆ ವೇಗ ನೀಡಬೇಕೆಂದು ಮುಖ್ಯಮಂತ್ರಿಗಳು ಪ್ರಾಧಿಕಾರದ ಆಯುಕ್ತರಿಗೆ ಸೂಚಿಸಿದರು.

    ಹೊಸ ಮರಳು ನೀತಿ 2020ನ್ನು ಡಿಸೆಂಬರ್ 2021ರಂದು ಜಾರಿಗೆ ತಂದಿದ್ದು, ಸಣ್ಣ ಬ್ಲಾಕ್ ಗಳಿವೆ. ಕಟ್ಟಡ ನಿರ್ಮಾಣ ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರ ಜೊತೆಗೆ ಸಾಂಪ್ರದಾಯಿಕವಾಗಿ ಮರಳು ತೆಗೆಯುವವರ ಹಿತಾಸಕ್ತಿಯನ್ನೂ ಕಾಪಾಡಬೇಕಿದೆ ಕಾರ್ಮಿಕರಿಗೆ ಸಮಸ್ಯೆಯಾಗದಂತೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ತಿಳಿಸಿದರು.

    Non CRZ ಪ್ರದೇಶದಲ್ಲಿ ಟೆಂಡರ್ ಕಂ ಹರಾಜು ಮೂಲಕ ಗುತ್ತಿಗೆ ಮಂಜೂರು ಮಾಡಲು 39 ಮರಳು ಬ್ಲಾಕ್ ಗಳನ್ನು ಗುರುತಿಸಲಾಗಿದೆ. ಈ ಪೈಕಿ 9 ಬ್ಲಾಕ್ ಗಳ ಟೆಂಡರ್ ಪ್ರಕ್ರಿಯೆ ಯಶಸ್ವಿಯಾಗಿದ್ದು, 30 ಮರಳು ಬ್ಲಾಕ್ ಗಳಿಗೆ ಮರುಹಾರಾಜು ಪ್ರಕ್ರಿಯೆ ಶೀಘ್ರ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸಭೆಗೆ ಮಾಹಿತಿ ಒದಗಿಸಿದರು.

    Click here

    Click here

    Click here

    Call us

    Call us

    8 ಲಕ್ಷ ಟನ್ ಮರಳು ಅಗತ್ಯವಿದೆ. ಜೆಲ್ಲಿ, ಕೆಂಪುಕಲ್ಲಿನ ಸಮಸ್ಯೆ ಇದೆ. ಮಂಗಳೂರು, ಉಡುಪಿಯಲ್ಲಿನ ಹವಾಗುಣಕ್ಕಾಗಿ ಗೃಹನಿರ್ಮಾಣಕ್ಕೆ ಬಳಕೆಯಾಗುತ್ತದೆ. ಇದರಲ್ಲಿ ಬಾಕ್ಸೈಟ್ ಇದೆ ಎಂಬ ಕಾರಣಕ್ಕೆ ಕೈಗಾರಿಕೆಗಳು ಇದನ್ನು ಬಳಸುತ್ತವೆ. ಜಿಲ್ಲೆಯಿಂದ ಹೊರಗೆ ಕಳಿಸುವುದು ಬೇಡ ಎಂಬ ಅಭಿಪ್ರಾಯ ಜನರಲ್ಲಿದೆ.

    ಮರಳು ಗಣಿಗಾರಿಕೆಗೆ ಪರವಾನಗಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಪರವಾನಗಿ ನೀಡಲಿ. ಮನೆ ಕಟ್ಟಲು ಅಗತ್ಯವಿರುವ ಸೈಜುಗಲ್ಲುಗಳಿಗೆ ಗಣಿಗಾರಿಕೆ ಮಾಡಲು ಕಾಯ್ದೆಯ ಸರಳೀಕರಣ ಮಾಡಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಬೇಕು ಎಂದು ಸಭೆಯಲ್ಲಿ ಮನವಿ ಮಾಡಲಾಯಿತು.

    ಕೆಂಪುಕಲ್ಲಿನ( Laterite) ಗಣಿಗಾರಿಕೆ ಗೆ 71 ಕಾರ್ಯಾದೇಶಗಳನ್ನು ಒಂದು ವರ್ಷದ ಅವಧಿಗೆ ನೀಡಲಾಗಿದೆ. ಖನಿಜವನ್ನು ಬಾಕ್ಸೈಟ್ ಆಗಿ ವಿಂಗಡಿಸಿರುವುದರಿಂದ 17.03.2023 ರಂದು ಕರ್ನಾಟಕ ಉಪಖನಿಜ ರಿಯಾಯಿತಿ ನಿಯಮಗಳು 1994 ಗೆ ತಿದ್ದುಪಡಿ ತಂದು ತಿದ್ದುಪಡಿ ನಿಯಮ 2023 ಜಾರಿಗೊಳಿಸಲಾಗಿದೆ. ಹೀಗಾಗಿ ಲ್ಯಾಟರೈಟ್ ಖನಿಜಕ್ಕೆ ಕಾರ್ಯಾದೇಶ ನೀಡುವುದನ್ನು ಕೈಬಿಡಲಾಗಿದೆ ಎಂದು ಸಭೆಯ ಗಮನಕ್ಕೆ ತರಲಾಯಿತು.

    ಸ್ಥಳೀಯ ಜಿಲ್ಲೆಗೆ ಅಗತ್ಯವಿರುವಂತೆ ಕಾಯ್ದೆಗೆ ತಿದ್ದುಪಡಿ ಮಾಡಬಹುದು. Laterite ಸಂಬಂಧಿಸಿದಂತೆ ಹಿಂದಿನ ಸರ್ಕಾರ ಮಾಡಲಾಗಿರುವ ತಿದ್ದುಪಡಿಯನ್ನು ಪುನಃ ತಿದ್ದುಪಡಿ ಮಾಡಿ ವಾಹನಗಳಿಗೆ ಅನುಮತಿ ನೀಡಬಹುದು. ಕ್ರಶಿಂಗ್ ಮಾಡಲಾದ ಮಣ್ಣನ್ನು ಜಿಲ್ಲೆಯೊಳಗಿನ ಬಳಕೆಗೆ ಮಾತ್ರ ಸೀಮಿತಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.

    ಜಿಲ್ಲಾ ಆಸ್ಪತ್ರೆಯಲ್ಲಿ 9 ಡಯಾಲಿಸಿಸ್ ಯಂತ್ರಗಳು ಕೆಟ್ಟಿದೆ. ಒಂದೇ ಯಂತ್ರ ಕಾರ್ಯನಿರ್ವಹಿಸುತ್ತಿದೆ. ಅಲ್ಲಿನ ಸಿಬ್ಬಂದಿಗೆ 6 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಕೂಡಲೇ ವೇತನ ನೀಡುವಂತೆ ಸಿಎಂ ಸೂಚಿಸಿದರು.

    ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್, ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ಸಚಿವರಾದ ಎಚ್.ಸಿ. ಮಹದೇವಪ್ಪ, ಚಲುವರಾಯಸ್ವಾಮಿ, ಬಿ.ನಾಗೇಂದ್ರ, ಹಿಂದುಳಿದ ವರ್ಗಗಳ ಆಯೋಗದ ಜಯಪ್ರಕಾಶ್ ಹೆಗ್ಡೆ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಮಂಜುನಾಥ್ ಭಂಡಾರಿ, ಮಾಜಿ‌ ಸಚಿವ ವಿನಯ್ ಕುಮಾರ್ ಸೊರಕೆ, ಮುಖಂಡರಾದ ಗೋಪಾಲ ಪೂಜಾರಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ಕಾಂಚನ್, ಉದಯ್ ಕುಮಾರ್ ಶೆಟ್ಟಿ , ಎಂ.ಎ.ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾದ ಗಿರೀಶ್, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಹಾಜರಿದ್ದರು.

    ಲಾರಿ ಮಾಲಿಕರ ಮುಷ್ಕರ ಅಂತ್ಯ:
    ಮುಖ್ಯಮಂತ್ರಿಗಳ‌ ಸಭೆಯ ಬೆನ್ನಲ್ಲೇ ಸರಕಾರದಿಂದ ಸಕಾರಾತ್ಮಕ‌ ಪ್ರತಿಕ್ರಿಯೆ ದೊರೆತ ಕಾರಣ ಜಿಲ್ಲಾದ್ಯಂತ ಕಳೆದೊಂದು ವಾರದಿಂದ ಲಾರಿ ಮಾಲಿಕರು ಹಮ್ಮಿಕೊಂಡಿದ್ದ ಮುಷ್ಕರವನ್ನು ಕೈಬಿಡಲಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರ್ಕಾರಿ, ಸರ್ಕಾರೇತರ ಸಂಸ್ಥೆಗಳ ದೈನಂದಿನ ಚಟುವಟಿಕೆಯಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯ: ಜಿಲ್ಲಾಧಿಕಾರಿ

    20/12/2025

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.