ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೆಂಗಳೂರಿನ ಸ್ವಯಂಸ್ಪೂರ್ತಿ ಫೌಂಡೇಶನ್ ವತಿಯಿಂದ ಸಮೃದ್ಧ ಬೈಂದೂರು ಯೋಜನೆಯ ಭಾಗವಾಗಿ ಬೈಂದೂರು ತಾಲೂಕಿನ ಸ.ಹಿ.ಪ್ರಾ ಶಾಲೆ ಬಿಜೂರು, ಸ.ಹಿ.ಪ್ರಾ ಶಾಲೆ ಕಾಲ್ತೊಡು ಹಾಗೂ ಸ.ಹಿ.ಪ್ರಾ ಶಾಲೆ ಜಡ್ಕಲ್’ನಲ್ಲಿ ನಿರ್ಮಿಸಿರುವ ಕಂಪ್ಯೂಟರ್ ಲ್ಯಾಬ್ ಮತ್ತು ಗ್ರಂಥಾಲಯವನ್ನೊಳಗೊಂಡ ಒಳಗೊಂಡ ಒಟ್ಟು 7.5 ಲಕ್ಷ ವೆಚ್ಚದ ‘ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರ’ಕ್ಕೆ ಇತ್ತೀಚಿಗೆ ಚಾಲನೆ ನೀಡಲಾಯಿತು.
ಶಾಸಕ ಗುರುರಾಜ್ ಗಂಟಿಹೊಳೆ ಅವರು ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿಗಳನ್ನು ಹಸ್ತಾಂತರಿಸಿದರು.
ಫೌಂಡೇಶನ್ ವತಿಯಿಂದ ಆಯೋಜಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಈ ವೇಳೆ ಶಾಲೆಗಳ ಮುಖ್ಯೋಪಧ್ಯಾಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು, ಸ್ವಯಂಸ್ಪೂರ್ತಿ ಫೌಂಡೇಶನ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸರಕಾರಿ ಶಾಲೆ ಮಕ್ಕಳಿಗೆ ಓದಲು ಕಲಿಕಾ ಸ್ನೇಹಿ ವಾತಾವರಣ ನಿರ್ಮಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕೆನ್ನುವ ಮಹತ್ವಾಕಾಂಕ್ಷೆಯಿಂದ “ಸ್ವಯಂಸ್ಪೂರ್ತಿ ಕೌಶಲ್ಯ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇದರ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆಯುವಂತಾಗಲಿ – ನಾಗರಾಜ ಶೆಟ್ಟಿ ಜಡ್ಕಲ್, ಸ್ವಯಂಸ್ಪೂರ್ತಿ ಫೌಂಡೇಶನ್ ಅಧ್ಯಕ್ಷ