ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯಶಸ್ವಿಯಾಗಿ ಆಯೋಜಿಸಲಾಗುತ್ತಿರುವ ಕುಂದಗನ್ನಡ ಉತ್ಸವವನ್ನು ಈ ಭಾರಿಯೂ ಅದ್ದೂರಿಯಾಗಿ ನಡೆಸಲು ತಯಾರಿ ನಡೆಸಲಾಗಿದೆ.
ಅಕ್ಟೋಬರ್ 29ರಂದು ಯುಎಇ ಅಜ್ಮನ್ ನಗರದಲ್ಲಿ ಬೆಳಿಗ್ಗೆ 11ರಿಂದ ಸಂಜೆ 6 ಗಂಟೆಯ ತನಕ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯಾಗಿ ಗಲ್ಫ್ ದೇಶದಲ್ಲಿ ಮಂದರ್ತಿ ಮೇಳದಿಂದ ಮೊದಲ ಭಾರಿಗೆ ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ. ಮೇಳದ ಕಲಾವಿದರು ಹಾಗೂ ಅನಿವಾಸಿ ಭಾರತೀಯ ಕಲಾವಿದರಿಂದ ‘ಪಾಪಣ್ಣ ವಿಜಯ – ಗುಣಸುಂದರಿ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಅಂದು ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು ಭಾಗವಹಿಸಲಿದ್ದು ಈ ವೇಳೆ ವಿವಿಧ ಕ್ಷೇತ್ರಗಳ ಎಲೆಮರೆಯ ಸಾಧಕರಿಗೆ ಕುಂದಾಪ್ರ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಆಯೋಜಿಸಲಾಗುತ್ತಿರುವ ಈ ಅದ್ದೂರಿ ಸಮಾರಂಭದಲ್ಲಿ ಸಂಸ್ಥೆಯ ಪೋಷಕರು, ಗೌರವಾಧ್ಯಕ್ಷರು ಸೇರಿದಂತೆ ವಿವಿಧ ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಸದಸ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷರಾದ ಸದನ್ ದಾಸ್ 0507576238, ಕಾರ್ಯದರ್ಶಿ ಸುಧಾಕರ ಪೂಜಾರಿ 0529221333 ಅವರನ್ನು ಸಂಪರ್ಕಿಸಬಹುದಾಗಿದೆ.
One thought on “ದುಬೈನಲ್ಲಿ ಕುಂದಗನ್ನಡ ಉತ್ಸವ – 2023: ಮಂದರ್ತಿ ಮೇಳದ ಯಕ್ಷಗಾನ, ಸಾಧಕರಿಗೆ ಸನ್ಮಾನ”