ನಟ ಪ್ರಜ್ವಲ್ ದೇವರಾಜ್ 40ನೇ ಸಿನಿಮಾಗೆ ಗುರುದತ್ ಗಾಣಿಗ ಆಕ್ಷನ್ ಕಟ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು:
ನಟ ಪ್ರಜ್ವಲ್ ದೇವರಾಜ್ ನಟನೆಯ 40ನೇ ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿದ್ದು, ಸಿನಿ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟುಹಾಕಿದೆ. ಹಬ್ಬದ ಸಂಭ್ರಮದಲ್ಲಿ ಪೋಸ್ಟರ್ ಜೊತೆಗೆ ಅಭಿಮಾನಿಗಳ ಮುಂದೆ ಬಂದಿರುವ ಪ್ರಜ್ವಲ್ ಅವರ ಈ ಹೊಸ ಸಿನಿಮಾಗೆ ಟೈಟಲ್ ಇನ್ನೂ ಫೈನಲ್ ಆಗಿಲ್ಲ. ಪೋಸ್ಟರ್ ಭರ್ಜರಿಯಾಗಿದ್ದು ಇದುವರೆಗೂ ಕಾಣಿಸಿಕೊಳ್ಳದೆ ಇರುವ ಪಾತ್ರದಲ್ಲಿ ಪ್ರಜ್ವಲ್ ನಟಿಸುತ್ತಿದ್ದಾರೆ.

Call us

Click Here

ಪ್ರಜ್ವಲ್ ಅವರ 40ನೇ ಸಿನಿಮಾಗೆ ‘ಅಂಬಿ ನಿಂಗೆ ವಯಸಾಯ್ತೋ’ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರುದತ್ ನಿರ್ದೇಶನದ ಮೊದಲ ಸಿನಿಮಾ ‘ಅಂಬಿ ನಿಂಗೆ ವಯಸಾಯ್ತೋ’ 2018 ರಲ್ಲಿ ಬಿಡುಗಡೆಯಾಗಿತ್ತು. ಮೊದಲ ಸಿನಿಮಾದಲ್ಲೇ ರೆಬಲ್ ಸ್ಟಾರ್ ಅಂಬರೀಶ್, ಕಿಚ್ಚ ಸುದೀಪ್, ಸುಹಾಸಿನಿ ಅಂತಹ ದೊಡ್ಡ ದೊಡ್ಡ ಸ್ಟಾರ್ ಕಲಾವಿದರಿಗೆ ನಿರ್ದೇಶನ ಮಾಡಿದ್ದ ಗುರು ಮುಂದಿನ ಸಿನಿಮಾ ಯಾರ ಜೊತೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇತ್ತು. ಇದೀಗ ಆ ಎಲ್ಲಾ ಕುತೂಹಲ ಮತ್ತು ಪ್ರಶ್ನೆಗಳಿಗೆ ತೆರೆಬಿದ್ದಿದೆ.

ಸಿನಿಮಾದ ಪೋಸ್ಟರ್ ನೋಡಿದ್ದರೆ ಇದು ಕಂಬಳದ ಬಗ್ಗೆ ಇರುವ ಸಿನಿಮಾ ಎನ್ನುವುದು ಗೊತ್ತಾಗುತ್ತಿದೆ. ಈ ಮೂಲಕ ಕರಾವಳಿ ಭಾಗದ ಮತ್ತೊಂದು ಸಿನಿಮಾ ಚಿತ್ರಮಂದಿರದ ಅಂಗಳಕ್ಕೆ ಬರಲು ಸಜ್ಜಾಗುತ್ತಿದೆ. ಈ ಸಿನಿಮಾ ವಿಕೆ ಫಿಲ್ಮ್ಸ್ ಹಾಗೂ ಗುರುದತ್ ಗಾಣಿಗ ನಿರ್ಮಾಣದಲ್ಲಿ ಮೂಡಿಬರುತ್ತಿದೆ. ಗುರು ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಈ ಸಿನಿಮಾಗೆ ಸಚಿನ್ ಬಸ್ರೂರು ಸಂಗೀತವಿದೆ. ಅಭಿಮನ್ಯು ಸದಾನಂದ್ ಅವರ ಕ್ಯಾಮರಾ ವರ್ಕ್ ಸಿನಿಮಾಗಿದೆ. ಪೋಸ್ಟರ್ ಮೂಲಕ ಕುತೂಹಲ ಹೆಚ್ಚಿಸಿರುವ ಈ ಸಿನಿಮಾ ಸದ್ಯದಲ್ಲೇ ಟೈಟಲ್ ಮತ್ತು ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬರಲಿದೆ.

Leave a Reply