ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರದಿಂದ ಬೈಂದೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಮುಳ್ಳಿಕಟ್ಟೆ ನಡುವೆ ರಾಷ್ಟ್ರೀಯ ಹೆದ್ದಾರಿ 66ರರಲ್ಲಿ ಪಲ್ಟಿಯಾಗಿ 18ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಬುಧವಾರ ಸಂಜೆ ನಡೆದಿದೆ.
ಕುಂದಾಪುರದಿಂದ ಹೊರಟ ಲೋಕಲ್ ಬಸ್ಸು ಅರಾಟೆ ಸೇತುವೆ ದಾಟಿದ ಬಳಿಕ ಚಾಲಕನ ಅತಿವೇಗದಿಂದಾಗಿ ನಿಯಂತ್ರಣ ತಪ್ಪಿದ್ದು, ಡಿವೈಡರ್ ಏರಿ ಪಕ್ಕದ ರಸ್ತೆಗೆ ಪಲ್ಟಿಯಾಗಿದೆ. ಇದೇ ವೇಳೆ ಎದುರಿಗೆ ಬರುತ್ತಿದ್ದ ಕಾರಿಗೂ ಡಿಕ್ಕಿ ಹೊಡೆದಿದೆ. ಅಘಘಾತದ ರಭಸಕ್ಕೆ ಬಸ್ಸಿನಲ್ಲಿದ್ದ 18ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/
ಅಪಘಾತ ನಡೆದ ತಕ್ಷಣ ಬಸ್ಸಿನ ಚಾಲಕ ಪರಾರಿಯಾಗಿದ್ದಾನೆ. ಬಸ್ಸಿನಲ್ಲಿ 40ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಕುಂದಾಪುರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಾಯಗೊಂಡವರ ನಿಖರ ಸಂಖ್ಯೆ ಇನ್ನಷ್ಟೇ ತಿಳಿದುಬರಬೇಕಿದೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/
ಘಟನಾ ಸ್ಥಳಕ್ಕೆ ಗಂಗೊಳ್ಳಿ ಪಿಎಸ್ಐ ಹರೀಶ್ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು, ಪೊಲೀಸರು ಹಾಗೂ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿದರು. ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು./ಕುಂದಾಪ್ರ ಡಾಟ್ ಕಾಂ/