ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಶ್ರೀ ರಾಮಕ್ಷತ್ರಿಯ ಯುವಕ ಸಮಾಜ ಶ್ರೀ ಸೀತಾರಾಮಚಂದ್ರ ದೇವಸ್ಥಾನದ 37ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭ ಅ.20ರಿಂದ 23ರ ತನಕ ವಿಜೃಂಭಣೆಯಿಂದ ಜರುಗಲಿದೆ.
ಅ.20ರ ಬೆಳಿಗ್ಗೆ ಶ್ರೀ ಶಾರದಾಂಬೆಯನ್ನು ಮೂರ್ತಿಯನ್ನು ಮೆರವಣಿಗೆಯಲ್ಲಿ ತಂದು ಪ್ರತಿಷ್ಠಾಪಿಸಿದ ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಭಜನಾ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಅಂದು ಸಂಜೆ ನವಚಂಡಿಕಾ ಯಾಗ ನಡೆಯಲಿದೆ. ಅದೇ ದಿನ ಮಕ್ಕಳು ಹಾಗೂ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳ ಜೊತೆಗೆಯಲ್ಲಿ, ಭಗವದ್ಗೀತಾ ಪಠಣ ಸ್ಪರ್ಧೆ, ಭಜನಾ ಕುಣಿತ ಸ್ಪರ್ಧೆಗಳು ಇರಲಿದೆ.
ಅ.21ರಂದು ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಲಿದ್ದು ವಿವಿಧ ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ. ಅಂದು ರಾಮಕ್ಷತ್ರಿಯ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುತ್ತದೆ. ಬಳಿಕ ನೃತ್ಯನಿಕೇತನ ಕೊಡವೂರು ತಂಡದಿಂದ ನೃತ್ಯ ಸಿಂಚನ ಜರುಗಲಿದೆ. ಅ.22ರ ಸಭಾ ಕಾರ್ಯಕ್ರಮದಲ್ಲಿಯೂ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ರಾಮಕ್ಷತ್ರಿಯ ಸಾಂಸ್ಕೃತಿಕ ವೈಭವ ಸ್ಪರ್ಧೆಗಳು ಜರುಗಲಿದೆ. ಅ.23ರಂದು ವೈಭವದ ನಗರೋತ್ಸವ ಜರುಗಲಿದೆ.
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ರಾಮಕ್ಷತ್ರಿಯ ಯುವಕ ಸಮಾಜದ ಗೌರವಾಧ್ಯಕ್ಷರಾದ ರಾಘವೇಂದ್ರ ದಡ್ಡು, ಅಧ್ಯಕ್ಷ ಸುರೇಂದ್ರ ಡಿ., ಪ್ರಧಾನ ಕಾರ್ಯದರ್ಶಿ ರವೀಂದ್ರ ಸೋಡಿತಾರ್, ಕಾರ್ಯದರ್ಶಿ ಗಿರೀಶ್ ಕಲ್ಲುಕಂಟ ಅವರು ತಿಳಿಸಿದ್ದಾರೆ.
ವಿವಿಧ ಸ್ಪರ್ಧೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷರನ್ನು ಸಂಪರ್ಕಿಸುವುದು: 8618346836