ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರಮೋದ್ ಮಧ್ವರಾಜ್ ಅಭಿಮಾನಿಗಳ ಬಳಗ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ.ಉಡುಪಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಿ. ಕುಂದಾಪುರ ಇವರ ಸಹಯೋಗದೊಂದಿಗೆ ಕುಂದಾಪುರ ಕಲಾಮಂದಿರದಲ್ಲಿ ನಡೆದ ರಕ್ತದಾನ ಶಿಬಿರ ನಡೆಯಿತು.

ಉದ್ಯಮಿ ಆನಂದ ಸಿ ಕುಂದರ್ ರಕ್ತದಾನ ಶಿಬಿರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸಂಪತ್ ಶೆಟ್ಟಿ, ಜಯಕರ್ ಶೆಟ್ಟಿ, ಜಯಪ್ರಕಾಶ್ ಶೆಟ್ಟಿ, ಸುನೀಲ್ ಶೆಟ್ಟಿ,ರಕ್ತದ ಆಪತ್ಬಾಂದವ ಸತೀಶ್ ಸಾಲ್ಯಾನ್ ಮಣಿಪಾಲ್, ಶರತ್ ಕಾಂಚನ್ , ಸತೀಶ್ ಪೂಜಾರಿ, ಪ್ರಶಾಂತ್ ತಲ್ಲೂರು ಉಪಸ್ಥಿತ್ತರಿದ್ದರು.
ರಕ್ತದಾನ ಶಿಬಿರದಲ್ಲಿ ದಾಖಲೆಯ 143 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.