ಬೈಂದೂರು ದಸರಾ ಕಾರ್ಯಕ್ರಮಕ್ಕೆ ಚಾಲನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ದೇವರ ಆರಾಧನೆಯಿಂದ ಮಾನಸಿಕ ನೆಮ್ಮದಿಯ ಜೊತೆಗೆ ಸುಖಃ ಸಮೃದ್ದಿ ದೊರೆಯುತ್ತದೆ. ಇದು ಈ ಪುಣ್ಯ ಭೂಮಿಯ ಮಹಿಮೆಯಾಗಿದೆ. ಧಾರ್ಮಿಕ ಶ್ರದ್ಧೆ ಭಕ್ತಿ ಮತ್ತು ಭಗವಂತನ ಆರಾಧನೆಯಿಂದ ಬದುಕು ಸಾರ್ಥಕಗೊಳ್ಳುತ್ತದೆ. ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಬಂದೂರಿನಲ್ಲಿ ಆರಂಭಿಸಿದ ಬೈಂದೂರು ದಸರಾ ಮುಂದಿನ ದಿನಗಳಲ್ಲಿ ರಾಜ್ಯ ಗುರುತಿಸುವಂತ ದಸರಾ ಸಂಭ್ರಮವಾಗಿ ಮೂಡಿಬರಲಿ ಎಂದು ಹಿರಿಯ ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ಹೇಳಿದರು.

Call us

Click Here

ಅವರು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಸುವರ್ಣ ಮಹೋತ್ಸವದ ಕಾರ್ಯಕ್ರಮ ಬೈಂದೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಈ ಮಾತುಗಳನ್ನಾಡಿ ನಮ್ಮ ಪೂರ್ವಜರು ಅನೇಕ ಕೊಡುಗೆಗಳನ್ನು, ಆಚರಣೆಗಳನ್ನು ನಮಗೆ ಬಿಟ್ಟುಹೋಗಿದ್ದಾರೆ. ಅವರ ಋಣಗಳನ್ನು ಪೂರೈಸುವ ಜವಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ಅಣ್ಣಪ್ಪ ಪೂಜಾರಿ ಯಡ್ತರೆ, ಸುಪ್ರೀತಾ ದೀಪಕ್ ಕುಮಾರ್ ಶೆಟ್ಟಿ, ನಾಗರಾಜ ಗಾಣಿಗ, ಪ್ರಭಾಕರ ಶೆಟ್ಟಿ ನೆಲ್ಯಾಡಿ, ನಾಗರಾಜ ಶೆಟ್ಟಿ ನಾಕಟ್ಟೆ, ಗಣೇಶ ಪೂಜಾರಿ, ಆನಂದ ಶೆಟ್ಟಿ, ಪ್ರಶಾಂತ ಪೂಜಾರಿ, ಗೋಪಾಲ ಗಾಣಿಗ ಬಂಕೇಶ್ವರ, ಮಹೇಶ್ ಆಚಾರ್, ನಿತಿನ್ ಬಂದೂರು, ರಾಘವೇಂದ್ರ ಪೂಜಾರಿ, ಉಮೇಶ ದೇವಾಡಿಗ, ರವೀಂದ್ರ ಶೆಟ್ಟಿ ಆರ‍್ಮಕ್ಕಿ ಮೊದಲಾದವರು ಹಾಜರಿದ್ದರು.

ಈ ಸಂದರ್ಭದಲ್ಲಿ ಸುವರ್ಣ ಮಹೋತ್ಸವದ ಲಾಂಛನ ಬಿಡುಗಡೆಗೊಳಿಸಲಾಯಿತು. ಸುವರ್ಣ ಮಹೋತ್ಸವ ಶಾರದೋತ್ಸವ ಸಮಿತಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ರಾಜೇಶ್ ಆಚಾರ್ ವಂದಿಸಿದರು.

Leave a Reply