Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರತಿಯೊಬ್ಬ ನಾಗರಿಕರು ಕಾನೂನುಗಳನ್ನು ಪಾಲಿಸಿದ್ದಲ್ಲಿ ಅಪರಾಧಿಕ ಪ್ರಕರಣಗಳಿಂದ ದೂರ ಇರಲು ಸಾಧ್ಯ: ನ್ಯಾ. ಶಾಂತವೀರ ಶಿವಪ್ಪ
    ಉಡುಪಿ ಜಿಲ್ಲೆ

    ಪ್ರತಿಯೊಬ್ಬ ನಾಗರಿಕರು ಕಾನೂನುಗಳನ್ನು ಪಾಲಿಸಿದ್ದಲ್ಲಿ ಅಪರಾಧಿಕ ಪ್ರಕರಣಗಳಿಂದ ದೂರ ಇರಲು ಸಾಧ್ಯ: ನ್ಯಾ. ಶಾಂತವೀರ ಶಿವಪ್ಪ

    Updated:24/10/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ,ಅ21:
    ಸಮಾಜದ ಪ್ರತಿಯೊಬ್ಬ ನಾಗರಿಕರು ಕಾನೂನುಗಳನ್ನು ಪಾಲಿಸಿದ್ದಲ್ಲಿ ಅಪರಾಧಿಕ ಪ್ರಕರಣಗಳಿಂದ ದೂರ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ರವರು ತಿಳಿಸಿದರು.

    Click Here

    Call us

    Click Here

    ಅವರು ಇಂದು ನಗರದ ಚಂದು ಮೈದಾನದ ಜಿಲ್ಲಾ ಸಶಸ್ತç ಮೀಸಲು ಪೊಲೀಸ್ ಪಡೆ ಕೇಂದ್ರ ಸ್ಥಾನದಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಪುಷ್ಪಾರ್ಚನೆ ಮೂಲಕ ಗೌರವ ಸಲ್ಲಿಸಿ, ಮಾತನಾಡಿದರು.

    ಪೊಲೀಸರು ತಮ್ಮ ಕರ್ತವ್ಯದ ಸಂದರ್ಭದಲ್ಲಿ ಅನುಭವಿಸಿದ ತೊಂದರೆಯನ್ನು ಸಮಾಜದಲ್ಲಿ ಯಾರೂ ಗಮನ ಹರಿಸುವುದಿಲ್ಲ. ಪತ್ರಿಕೆಯಲ್ಲಿ ಬಂದಾಗ ಒಂದು ದಿನ ಸಹಾನುಭೂತಿ ತೋರಿಸಿ, ಮುಂದೆ ಅದನ್ನು ಮರೆಯುತ್ತಾರೆ ಹೀಗಾಗಬಾರದು, ಜನರು ದಿನನಿತ್ಯ ತಪ್ಪದೇ ಕಾನೂನು ಪಾಲನೆ ಮಾಡಬೇಕು ಎಂದರು.

    ಪೊಲೀಸರು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಜನರು ಸಹಕರಿಸಬೇಕು. ಪ್ರಸ್ತುತ ಪೊಲೀಸ್ ಇಲಾಖೆಯು ಸುಧಾರಿಸಿದೆ. ಆಧುನಿಕ ಶಸ್ತಾçಸ್ತçಗಳನ್ನು ಸಹ ನೀಡಲಾಗಿದೆ. ನುರಿತ ತರಬೇತಿ ಹೊಂದಿದವರನ್ನು ಪೊಲೀಸ್ ಇಲಾಖೆಗೆ ನೇಮಕಾತಿ ಮಾಡಲಾಗುತ್ತಿದೆ. ಪೊಲೀಸ್ ಕರ್ತವ್ಯ ನಿರ್ವಹಿಸುವಾಗ ಮರಣ ಹೊಂದುವವರ ಸಂಖ್ಯೆ ಸಾಕಷ್ಟು ಕಡಿಮೆಯಾಗಬೇಕು ಎಂದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಮಾತನಾಡಿ, 1959 ಅಕ್ಟೋಬರ್ 21 ರಂದು ಕೇಂದ್ರ ಮೀಸಲು ಪಡೆಯ ಪೊಲೀಸ್ ಉಪಾಧೀಕ್ಷಕರಾದ ಕರಣ್ ಸಿಂಗ್ ರವರ ನೇತೃತ್ವದಲ್ಲಿ ಭಾರತೀಯ ಪೊಲೀಸರು ಭಾರತ ಮತ್ತು ಚೀನಾ ಗಡಿಯ ಪ್ರದೇಶದ 16 ಸಾವಿರ ಅಡಿ ಎತ್ತರದ ದುರ್ಗಮ ಪ್ರದೇಶವಾದ ಹಾಟ್ ಸ್ಪಿçಂಗ್ಸ್ನಲ್ಲಿ ಗಸ್ತು ಕರ್ತವ್ಯದಲ್ಲಿದ್ದಾಗ ಅಧಿಕ ಸಂಖ್ಯೆಯಲ್ಲಿ ಸುಸಜ್ಜಿತ ಶಸ್ತಾçಸ್ತçಗಳೊಂದಿಗೆ ಚೀನಾದ ಸೈನಿಕರು ಅತಿಕ್ರಮಣಕ್ಕೆ ಯತ್ನಿಸಿದಾಗ, ಭಾರತೀಯ ಪೊಲೀಸರು, ತಮ್ಮಲ್ಲಿ ಸಾಕಷ್ಟು ಅತ್ಯಾಧುನಿಕ ಶಸ್ತಾçಸ್ತçಗಳು ಇಲ್ಲದಿದ್ದರೂ ಸಹ ಚೀನಾ ದೇಶದ ಸೈನಿಕರೊಡನೆ ಕೊನೆಯ ಗುಂಡು ಹಾಗೂ ಉಸಿರಿರುವ ತನಕ ಧೈರ್ಯ ಹಾಗೂ ಶೌರ್ಯದಿಂದ ಹೋರಾಡಿ, 10 ಮಂದಿ ಪ್ರಾಣ ಕಳೆದುಕೊಂಡು 9 ಮಂದಿ ಸೆರೆ ಹಿಡಿಯಲ್ಪಟ್ಟಿದ್ದರು. ಈ ಧೀರ ಯೋಧರ ನೆನಪಿಗಾಗಿ ಪೊಲೀಸ್ ಹುತಾತ್ಮರ ದಿನವೆಂದು ಆಚರಿಸಿ, ತಮ್ಮ ಕರ್ತವ್ಯ ನಿರ್ವಹಣೆಯ ಸಮಯ ಪ್ರಾಣ ಕಳೆದುಕೊಂಡ ಪೊಲೀಸರ ಸ್ಮರಣೆ ಮಾಡುತ್ತಾ ಇಂದಿಗೂ ಕೂಡ ಆಚರಿಸುತ್ತಿದ್ದೇವೆ ಎಂದರು.

    Click here

    Click here

    Click here

    Call us

    Call us

    ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಸಾರ್ವಜನಿಕರ ರಕ್ಷಣೆ, ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ತಮ್ಮ ಪ್ರಾಣತ್ಯಾಗ ಮಾಡಿದ 189 ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಹೆಸರನ್ನು ವಾಚಿಸಿದರು.

    ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಸಿ.ಐ.ಡಿ ವಿಭಾಗದ ಐ.ಜಿ.ಪಿ ಪ್ರವೀಣ್ ಮಧುಕರ್ ಪವಾರ್, ಜಿ.ಪಂ. ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎ.ಎಸ್.ಪಿ ಎಸ್.ಟಿ ಸಿದ್ಧಲಿಂಗಪ್ಪ, ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ್ ಎಂ ನಾಯಕ್ ಹಾಗೂ ಮತ್ತಿತರ ಗಣ್ಯರು ಪುಷ್ಪಗಳನ್ನು ಅರ್ಪಿಸಿ, ಗೌರವ ಸಲ್ಲಿಸಿದರು.

    ಡಿವೈಎಸ್ಪಿ ದಿನಕರ್ ಪಿ.ಕೆ ಅವರ ನೇತೃತ್ವದಲ್ಲಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಹಾಗೂ ಪೆರೇಡ್ ಮೂಲಕ ಗೌರವವನ್ನು ಸಲ್ಲಿಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರ್ಕಾರಿ, ಸರ್ಕಾರೇತರ ಸಂಸ್ಥೆಗಳ ದೈನಂದಿನ ಚಟುವಟಿಕೆಯಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯ: ಜಿಲ್ಲಾಧಿಕಾರಿ

    20/12/2025

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.