ಕುಂದಾಪುರ: ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಹಾಗೂ ವಿಕಲಚೇತನ ವಿದ್ಯಾರ್ಥಿಗಳ ಕ್ರೀಡಾಕೂಟ ಉದ್ಘಾಟನೆ

Call us

Call us

Call us

Call us

Click here

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಉಡುಪಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರು ಹಲವರಿದ್ದು, ವಿವಿಧ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದರೂ ಕ್ರೀಡಾ ಕ್ಷೇತ್ರದ ಸಾಧನೆಯಲ್ಲಿ ಸ್ವಲ್ಪಮಟ್ಟಿಗಿನ ಹಿನ್ನೆಡೆ ಕಂಡುಬರುತ್ತದೆ. ವಿದ್ಯಾರ್ಥಿಗಳು ಸಕ್ರಿಯವಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳುವ ಮೂಲಕ ಕ್ರೀಡಾ ಕ್ಷೇತ್ರದಲ್ಲಿ ಬದಲಾವಣೆಗೆ ಕಾಲ ಪಕ್ವವಾಗಿದ್ದು, ಪ್ರಸಕ್ತ ಬದಲಾವಣೆ ಸಮಯ ಆಗಲಿ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

Call us

Click Here

Click here

ಜಿಲ್ಲಾ ಪಂಚಾಯಿತಿ ಉಪನಿರ್ದೇಶಕರ ಕಚೇರಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕುಂದಾಪುರ ವಲಯ, ಕುಂದಾಪುರ ಸರ್ಕಾರಿ ಪದವಿಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗ ಆಶ್ರಯದಲ್ಲಿ ಇಲ್ಲಿನ ಗಾಂಧಿ ಮೈದಾನದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಹಾಗೂ ವಿಕಲಚೇತನ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿ, ಕ್ರೀಡಾ ಪಟುಗಳಿಗೆ ಗೆಲುವಿನ ಬಹುಮಾನದ ಗುರುಯಿರಬೇಕು. ಸೋಲು ನಿರಾಸೆಗೆ ದಾರಿಯಾಗಬಾರದು. ಕ್ರೀಡೆಯಲ್ಲಿ ಉತ್ತಮ ಅವಕಾಶಗಳಿದ್ದು, ಬದಲಾವಣೆ ತರುವ ಮೂಲಕ ಸಾಧನೆಯ ಶಿಖರವೇರಬೇಕು ಎಂದರು.

ಕುಂದಾಪುರ ಪುರಸಭೆ ಮಾಜಿ ಅಧ್ಯಕ್ಷ ಮೋಹನದಾಸ ಶೆಣೈ, ದ್ವಜಾರೋಹಣ ನೆರವೇರಿಸಿದರೆ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಕ್ರೀಡಾ ಜ್ಯೋತಿ ಬೆಳಗಿಸಿದರು. ಕುಂದಾಪುರ ತಹಸೀಲ್ದಾರ್ ಶೋಭಾಲಕ್ಷ್ಮೀ ಹೆಚ್.ಎಸ್.ಕ್ರೀಡಾಕೂಟ ಉದ್ಘಾಟಿಸಿದರು.

ಕುಂದಾಪುರ ಜೂನಿಯರ್ ಕಾಲೇಜ್ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ., ಉಪ ಪ್ರಾಂಶುಪಾಲ ಕಿರಣ್ ಹೆಗ್ಡೆ, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಮಂಜುನಾಥ ಆರ್., ಜೂನಿಯರ್ ಕಾಲೇಜ್ ಎಸ್ಡಿಎಂಸಿ ಅಧ್ಯಕ್ಷ ಸತೀಶ್ ಕುಮಾರ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವೀಂದ್ರ ನಾಯಕ್, ವಿವಿಧ ಸಂಘಟನೆ ಪದಾಧಿಕಾರಿಗಳಾದ ಚಂದ್ರಶೇಖರ ಶೆಟ್ಟಿ, ಪ್ರಭಾಕರ ಶೆಟ್ಟಿ, ಪ್ರಕಾಶ್ಚಂದ್ರ ಶೆಟ್ಟಿ, ಯುವಜನ ಸೇವೆ ಹಾಗೂ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ ಇದ್ದರು.

Click here

Call us

Call us

Click Here

Visit Now

ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಣಪತಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಪರಿವೀಕ್ಷಕ ಗೋಪಾಲ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು.ಕ್ರೀಡಾಪಟು ಮಹಿಮಾ ಪ್ರತಿಜ್ಞಾ ವಿಧಿ ಭೋದಿಸಿದರು. ಶಿಕ್ಷಕರಾದ ಸತೀಶ್ ಶೆಟ್ಟಿ ಚಿತ್ರಪಾಡಿ, ಚಂದ್ರಶೇಖರ ಬೀಜಾಡಿ ನಿರೂಪಿಸಿದರು. ಕುಂದಾಪುರ ವಲಯ ಶಿಕ್ಷಣಾಧಿಕಾರಿ ಶೋಭಾ ಎಸ್.ಶೆಟ್ಟಿ ವಂದಿಸಿದರು.

ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಅವರು ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಸ್ಪೋಟ್ಸ್ ಡೇ ಅತ್ಯುತ್ತಮ ದಿನವಾಗಿದ್ದು, ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳ ಗುರಿ ಪದಕ ಪಡೆಯುವ ಕಡೆಗೆ ಇರಲಿ. ಭಾಗವಹಿಸುವಿಕೆಯಲ್ಲಿ ಸ್ಪಷ್ಟತೆಯಿರಬೇಕು. ಗುರಿಯಿಟ್ಟುಕೊಂಡು ಮುಂದಡಿ ಇಟ್ಟರೆ ಧಕ್ಕಿಸಿಕೊಳ್ಳುವುದು ಕಷ್ಟವಲ್ಲ.

ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಸುವುದಕ್ಕೆ ಬೆನ್ನೆಲುಬಾಗಿ ನಿಂತ ಸೂಪರ್ ಗ್ರೇಡ್ ಎಲೆಕ್ಟ್ರಿಕ್ ಗುತ್ತಿಗೆದಾರ ಕೆ.ಆರ್.ನಾಯಕ್, ಉದ್ಯಮಿಗಳಾದ ದಾಂಡೇಲಿ ಪ್ರಕಾಶ ಶೆಟ್ಟಿ ದಾಂಡೇಲಿ, ಪ್ರಕಾಶ ಶೆಟ್ಟಿ ಯಡ್ತಾಡಿ, ನಾಗರಾಜ ಶೆಟ್ಟಿ ಚಿತ್ತೂರು, ಸಂತೆಕಟ್ಟೆ ಕಳ್ತೂರು ನಾಗರಾಜ ಶೆಟ್ಟಿ ಅವರ ಸನ್ಮಾನಿಸಲಾಯಿತು. ಪಥ ಸಂಚಲನದಲ್ಲಿ ಪಾಲ್ಗೊಂಡು ಪ್ರಥಮ ಸ್ಥಾನ ಪಡೆದು ಕುಂದಾಪುರ ಪದವಿಪೂರ್ವ ಕಾಲೇಜ್ ಪ್ರೌಢಶಾಲೆ ವಿಭಾಗ ಹಾಗೂ ದ್ವಿತೀಯ ಸ್ಥಾನ ಪಡೆದ ಬೈಂದೂರು ಸರ್ಕಾರಿ ಪ್ರೌಢಶಾಲೆಗೆ ಬಹುಮಾನ ವಿತರಿಸಲಾಯಿತು.

Leave a Reply

Your email address will not be published. Required fields are marked *

eleven − 1 =