ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಮತ್ತು ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕುಂದಾಪುರದ ಜಂಟಿ ಆಶ್ರಯದಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್‌ನ ವಿದ್ಯಾರ್ಥಿಗಳು ಪ್ರತ್ಯೇಕ ಕ್ರೀಡಾ ವಿಭಾಗದಲ್ಲಿ ಸಾಧನೆಗೈದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ರೋಷನ್ ಆರ್ 14ರ ಒಳಗಿನ ವಯೋಮಾನದ ವಿದ್ಯಾರ್ಥಿಗಳ ವಿಭಾಗದಲ್ಲಿ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ 7ನೇ ತರಗತಿ ವಿದ್ಯಾರ್ಥಿ ಆಕಾಶ್, 14ರ ಒಳಗಿನ ವಯೋಮಾನದ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳ ಕ್ರೀಡಾಕೂಟದ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ, ಗುಂಡು ಎಸೆತ ಪ್ರಥಮ ಸ್ಥಾನ ಹಾಗೂ 100 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲಾ ಮಟ್ಟದ ಕ್ರೀಡಾಕೂಟದ ವೈಯಕ್ತಿಕ ಸಮಗ್ರ ಚಾಂಪಿಯನ್ ಟ್ರೋಫಿಯನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವರ್ಗ ಅಭಿನಂದಿಸಿದೆ.