ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ವಿಜ್ಞಾನ ಮತ್ತು ಗಣಿತ ಪ್ರಯೋಗಾಲಯ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಇಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಪೈಪೋಟಿ ಇದೆ. ಶೈಕ್ಷಣಿಕ ಕ್ಷೇತ್ರ ಬಹಳಷ್ಟು ವಿಸ್ತಾರವಾಗಿದ್ದು, ಶಿಕ್ಷಣಕ್ಕೆ ನಮ್ಮ ದೇಶದಲ್ಲಿ ವಿಪುಲ ಅವಕಾಶಗಳಿವೆ. ಸಾಕಷ್ಟು ಸಂಪನ್ಮೂಲಗಳು, ಸಂಪನ್ಮೂಲ ವ್ಯಕ್ತಿಗಳಿದ್ದು, ಇವೆಲ್ಲವನ್ನೂ ಬಳಸಿಕೊಂಡು ಸಮೃದ್ಧ ದೇಶ ಕಟ್ಟುವ ಕಾಯಕದಲ್ಲಿ ನಮ್ಮನ್ನು ತೊಡಗಿಸಿಕೊಳ್ಳಬೇಕು. ನಾವು ಹುಟ್ಟಿ ಬೆಳೆದ ಊರು ಮತ್ತು ಶಿಕ್ಷಣ ಪಡೆದ ಸಂಸ್ಥೆಗಳಲ್ಲಿ ನಾವೆಲ್ಲರೂ ತೊಡಗಿಸಿಕೊಂಡು, ಆ ಗ್ರಾಮದ, ದೇಶದ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಸಿದ್ಧಾಪುರ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಯ ಸಂಚಾಲಕ ಡಿ.ಗೋಪಾಲಕೃಷ್ಣ ಕಾಮತ್ ಹೇಳಿದರು.

Call us

Click Here

ಗಂಗೊಳ್ಳಿಯ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಾನಿಗಳಾದ ಡಾ.ಲೋಕೇಶ್ ಗಂಗೊಳ್ಳಿ ಸಹಕಾರದೊಂದಿಗೆ ನೂತನವಾಗಿ ನಿರ್ಮಿಸಲಾಗಿರುವ ವಿಜ್ಞಾನ ಮತ್ತು ಗಣಿತ ಪ್ರಯೋಗಾಲಯ ಉದ್ಘಾಟನೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಶುಕ್ರವಾರ ಅವರು ಮಾತನಾಡಿದರು.

ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಶಾಲಾಕ್ಷಿ ಮತ್ತು ಪಾಂಡುರಂಗ ಶೇರುಗಾರ್ ಅವರು ನೂತನ ವಿಜ್ಞಾನ ಮತ್ತು ಗಣಿತ ಪ್ರಯೋಗಾಲಯವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಇದೇ ಸಂದರ್ಭ ವಿಶಾಲಾಕ್ಷಿ ಮತ್ತು ಪಾಂಡುರಂಗ ಶೇರುಗಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಕಾರ್ಯದರ್ಶಿ ಎಚ್.ಗಣೇಶ ಕಾಮತ್, ಸದಸ್ಯರಾದ ಜಿ.ಗೋವಿಂದ್ರಾಯ ಆಚಾರ್ಯ, ಎನ್.ಅಶ್ವಿನ್ ನಾಯಕ್, ಎಂ.ನಾಗೇಂದ್ರ ಪೈ, ಸ.ವಿ. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ., ಉಪಪ್ರಾಂಶುಪಾಲ ಉಮೇಶ ಕರ್ಣಿಕ್ ಮತ್ತು ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಉಪಾಧ್ಯಕ್ಷ ಜಿ.ವಿಠಲ ಶೆಣೈ ಉಪಸ್ಥಿತರಿದ್ದರು.

ಶಾಲೆಯ ಆಡಳಿತ ಮಂಡಳಿ ಸದಸ್ಯ ಕೆ.ರಾಮನಾಥ ನಾಯಕ್ ಸ್ವಾಗತಿಸಿದರು. ಸಂಚಾಲಕ ಎನ್.ಸದಾಶಿವ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿ ಸಂಗೀತಾ ದಾನಿಗಳನ್ನು ಪರಿಚಯಿಸಿದರು. ಸಹಶಿಕ್ಷಕಿ ಸುಜಾತಾ ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ವಂದಿಸಿದರು.

Leave a Reply