ಕುಂದಾಪ್ರ ಕನ್ನಡದಲ್ಲಿ ಶುದ್ಧತೆ, ವೈವಿಧ್ಯತೆ ಇದೆ: ಸಹಾಯಕ ಆಯುಕ್ತೆ ರಶ್ಮಿ ಎಸ್. ಆರ್

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕನ್ನಡ ಕೇವಲ ಒಂದು ಭಾಷೆಯಲ್ಲ. ಅದು ನಮ್ಮ ಸಂಸ್ಕೃತಿ, ಪರಂಪರೆ, ಇತಿಹಾಸವನ್ನು ಬಿಂಬಿಸುತ್ತದೆ. ಸಾವಿರಾರು ವರ್ಷಗಳ ಇತಿಹಾಸವುಳ್ಳ ಈ ಭಾಷೆಯನ್ನು ನಾವು ಬೆಳೆಸಬೇಕು. ಕನ್ನಡ ಮಾಧ್ಯಮ ಶಾಲೆಗಳು ಬೆಳೆಯಬೇಕು. ಆದರೆ ಕನ್ನಡ ಮಾಧ್ಯಮದಲ್ಲಿ ಕಲಿತವರು ಇಂದು ಮಹೋನ್ನತ ಹುದ್ದೆಯನ್ನು ಅಲಂಕರಿಸಿರುವುದು ಗಮನದಲ್ಲಿರಲಿ ಎಂದು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್. ಆರ್. ಹೇಳಿದರು.

Call us

Click Here

ಇಲ್ಲಿನ ಗಾಂಧಿ ಮೈದಾನದಲ್ಲಿ ತಾಲೂಕು ಆಡಳಿತ, ಕುಂದಾಪುರ ಪುರಸಭೆ ವತಿಯಿಂದ ಜರುಗಿದ 68ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣಗೈದು ಅವರು ಮಾತನಾಡಿ ಕನ್ನಡ ಭಾಷೆಗೆ ತನ್ನದೇ ಆದ ವಿಭಿನ್ನತೆ ಇದೆ. ಧಾರವಾಡ, ಮೈಸೂರು, ಮಂಗಳೂರು, ಕುಂದಾಪುರ ಕನ್ನಡದಲ್ಲಿ ಬಹಳ ವೈವಿಧ್ಯತೆ ಇದೆ. ಆದರೆ ಕುಂದಾಪುರ ಕನ್ನಡ ಶುದ್ಧಕನ್ನಡವಾಗಿದೆ ಎಂದರು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಭಾರತಾಂಭೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ಡಿವೈಎಸ್ಪಿ ಕೆ.ಯು ಬೆಳ್ಳಿಯಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಶೋಭಾ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್ ಆರ್, ಯುವಜನ ಕ್ರೀಡಾ ಮತ್ತು ಸಬಲೀಕರಣ ಇಲಾಖಾಧಿಕಾರಿ ಕುಸುಮಾಕರ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ರಾಘವೇಂದ್ರ ವರ್ಣೇಕರ್, ಪುರಸಭಾ ಸದಸ್ಯರಾದ ದೇವಕಿ ಸಣ್ಣಯ್ಯ, ಚಂದ್ರಶೇಖರ ಖಾರ್ವಿ, ಪ್ರಭಾಕರ ವಿ, ಪ್ರಭಾವತಿ ಶೆಟ್ಟಿ, ಸಂದೀಪ್ ಖಾರ್ವಿ ಸಂತೋಷ್ ಶೆಟ್ಟಿ, ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ, ಸಿಪಿಐ ಜಯರಾಮ್ ಗೌಡ, ನಗರ ಠಾಣಾಧಿಕಾರಿ ವಿನಯ್ ಕೊರ್ಲಹಳ್ಳಿ, ಗಂಗೊಳ್ಳಿ ಕ್ರೈಂ ಪಿಎಸ್ಐ ಬಸವರಾಜ್ ಕನಶೆಟ್ಟಿ ಮತ್ತಿತರರು ಇದ್ದರು.

ಪೊಲೀಸರು ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ಬಳಿಕ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

Click here

Click here

Click here

Click Here

Call us

Call us

Leave a Reply

Your email address will not be published. Required fields are marked *

three × 5 =