ಹೊರನಾಡ ಕನ್ನಡಿಗ ದೀಪಕ್ ಶೆಟ್ಟಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Call us

Call us

Call us

‘ಕುಂದಾಪ್ರ ಡಾಟ್ ಕಾಂ’ ಸುದ್ದಿ.
ಕುಂದಾಪುರ:
ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಹೊರನಾಡ ಕನ್ನಡಿಗ ದೀಪಕ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಕತಾರ್ನಲ್ಲಿ ವಾಸಿಸುತ್ತಿರುವ ದೀಪಕ್ ಶೆಟ್ಟಿ ಅವರ ಸಾಮಾಜಿಕ ರಂಗದ ಸೇವೆ ಹಾಗೂ ವಿದೇಶದಲ್ಲಿನ ಕನ್ನಡ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Call us

Click Here

2013-15ರ ಸಾಲಿನಲ್ಲಿ ಕತಾರ್ ಕರ್ನಾಟಕ ಸಂಘದ ಅಧ್ಯಕ್ಷರಾಗಿ, ಅದಕ್ಕೂ ಹಿಂದಿನ ಅವಧಿಯಲ್ಲಿ ಸಂಘದ ಕಾರ್ಯದರ್ಶಿಯಾಗಿ, ಕ್ರೀಡಾ ಕಾರ್ಯದರ್ಶಿಯಾಗಿ, ಬಳಿಕ ಕರ್ನಾಟಕ ಸಂಘ ಕತಾರ್ನ ಸಲಹಾ ಸಮಿತಿ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದರು. ಕಳೆದ ಒಂದೂವರೆ ದಶಕಗಳಿಂದ ಕತಾರಿನಲ್ಲಿ ನೆಲೆಸಿರುವ ಇವರು ಉದ್ಯೋಗದೊಂದಿಗೆ ತುಳುಕೂಟ, ಬಂಟರ ಸಂಘ, ಭಾರತೀಯ ಸಾಂಸ್ಕ್ರತಿಕ ಕೇಂದ್ರ, ಇಂಡಿಯನ್ ಕಮ್ಯುನಿಟಿ ಬೆನವೊಲಂಟ್ ಪೋರಮ್ ಮುಂತಾದ ಸಂಘ-ಸಂಸ್ಥೆಗಳಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದಾರೆ.

ಬಡ ಮಕ್ಕಳ ಹೃದಯ ಚಿಕಿತ್ಸೆಗೆ ಸಹಕಾರ, ಶಾಲೆ, ಬಡ ವಿದ್ಯಾರ್ಥಿಗಳ ವಿಧ್ಯಾಭ್ಯಾಸಕ್ಕೆ ಧನಸಹಾಯ ಹೀಗೆ ಹಲವು ತೆರನಾಗಿ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ.

ಕತಾರ್ನ ಭಾರತೀಯ ರಾಯಭಾರಿ ಕೇಂದ್ರ ಹಾಗೂ ವಿವಿಧ ಸಂಘಟನೆಗಳು ಇವರ ಪರಿಸರ ಕಾಳಜಿ ಹಾಗೂ ಸಾಮಾಜಿಕ, ಮಾನವೀಯ ಕಾರ್ಯವನ್ನು ಗುರುತಿಸಿ ಸನ್ಮಾನಿಸಿವೆ. ಇವರಿಗೆ ಜಿಲ್ಲಾ ರಾಜ್ಯೋತ್ಸವ, ಆರ್ಯಭಟ ಪ್ರಶಸ್ತಿ, ಅಭಿಯಂತರ ಶ್ರೀ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಸನ್ಮಾನಗಳು ದೊರೆತಿವೆ.

ಮೂಲತಃ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚುಚ್ಚಿಯವರಾದ ದೀಪಕ್ ಶೆಟ್ಟಿ ಅವರು ವಿಜಯ ಬ್ಯಾಂಕ್ ನಿವೃತ್ತ ಮುಖ್ಯ ಕಾರ್ಯನಿರ್ವಣಾಧಿಕಾರಿಯಾಗಿದ್ದ ದಿ. ಸಚ್ಚಿದಾನಂದ ಶೆಟ್ಟಿ ಅವರು ಹಿರಿಯ ಪುತ್ರರಾಗಿದ್ದಾರೆ.

Click here

Click here

Click here

Click Here

Call us

Call us

Leave a Reply