ರೋಟರಿ ಜಿಲ್ಲಾ ಮಟ್ಟದ ಸಾಂಸ್ಕ್ರತಿಕ ಕಲಾವೈಭವ: ಬೈಂದೂರು ರೋಟರಿ ಕ್ಲಬ್ ಚಾಂಪಿಯನ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ರೋಟರಿ ಕ್ಲಬ್ ಕೋಟೇಶ್ವರ ಮತ್ತು ವಲಯ 2ರ ಎಲ್ಲಾ ರೋಟರಿ ಕ್ಲಬ್‌ಗಳ ಸಹಭಾಗಿತ್ವದಲ್ಲಿ ಭಾನುವಾರ ಕುಂದಾಪುರದಲ್ಲಿ ನಡೆದ ರೋಟರಿ ಜಿಲ್ಲೆ 3182ರ ಜಿಲ್ಲಾ ಮಟ್ಟದ ಸಾಂಸ್ಕ್ರತಿಕ ಕಲಾವೈಭವ ‘ಗೀತವಲ್ಲರಿ’ ಸ್ಪರ್ಧೆಯಲ್ಲಿ ಬೈಂದೂರು ರೋಟರಿ ಕ್ಲಬ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.

Call us

Click Here

ಬೈಂದೂರು ರೋಟರಿ ಕ್ಲಬ್ ಸದಸ್ಯರು ಭಾಗವಹಿಸಿದ 3 ಸ್ಪರ್ಧೆಗಳಲ್ಲಿಯೂ ಪ್ರಥಮ ಸ್ಥಾನಿಯಾಗುವ ಮೂಲಕ ಜಿಲ್ಲಾ ಮಟ್ಟದ ಚಾಂಪಿಯನ್ ಪಟ್ಟ ತಮ್ಮದಾಗಿಸಿಕೊಂಡಿದ್ದಾರೆ. ಭಾವಗೀತೆ ಸ್ಪರ್ಧೆಯಲ್ಲಿ ಪೂರ್ಣಿಮಾ ಪೈ, ಡುಯೆಟ್ ಸಾಂಗ್ ವಿಭಾಗದಲ್ಲಿ ರಾಘವೇಂದ್ರ ಉಡುಪ – ಪೂರ್ಣಿಮಾ ಪೈ ಹಾಗೂ ಗುಂಪು ನೃತ್ಯ ವಿಭಾಗದಲ್ಲಿ ನಾಗೇಂದ್ರ ಬಂಕೇಶ್ವರ ನೇತೃತ್ವದ ತಂಡ ಭಾಗವಹಿಸಿ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿತು.

ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಸಾಹಿತಿ ಜಯಪ್ರಕಾಶ್ ಮಾವಿನಕುಳಿ ಅವರು ಸಮಗ್ರ ಪ್ರಶಸ್ತಿ ಪ್ರದಾನ ಮಾಡಿದರು. ಬೈಂದೂರು ರೋಟರಿ ಕ್ಲಬ್ ಪರವಾಗಿ ಅಧ್ಯಕ್ಷ ಪ್ರಸಾದ್ ಪ್ರಭು ಶಿರೂರು, ಕಾರ್ಯದರ್ಶಿ ಸುಬ್ರಹ್ಮಣ್ಯ ಜಿ., ಉಪ್ಪುಂದ, ನಿಕಟಪೂರ್ವ ವಲಯ ಸೇನಾನಿ ಪ್ರವೀಣ್ ಕುಮಾರ್ ಶೆಟ್ಟಿ, ಸುಧಾಕರ ಪಿ ಹಾಗೂ ಕ್ಲಬ್ ಸದಸ್ಯರು ಬಹುಮಾನ ಪಡೆದುಕೊಂಡರು.

ಈ ವೇಳೆ ಜಿಲ್ಲಾ ಟ್ರೈನರ್ ಅಭಿನಂದನ್ ಶೆಟ್ಟಿ, ಕಾರ್ಯಕ್ರಮದ ಛೇರ್ಮನ್ ರವೀಂದ್ರ ಶೆಟ್ಟಿ ಸಾಂಸ್ಕೃತಿಕ ಕಾರ್ಯಕ್ರಮ ಛೇರ್ಮನ್ ಗಣೇಶ್ ಶೆಟ್ಟಿ ಎಂ., ವಲಯ -2ರ ವಲಯ ಸೇನಾನಿ ಆನಂದ ಆಚಾರ್, ಕೋಟೇಶ್ವರ ರೋಟರಿ ಅಧ್ಯಕ್ಷ ಜಗದೀಶ ಮೊಗವೀರ ಕಾರ್ಯದರ್ಶಿ ರಾಜು ಮೊಗವೀರ ಉಪಸ್ಥಿತರಿದ್ದರು.

Leave a Reply