ಬಸವ ವಸತಿ ಕಂತು ಬಿಡುಗಡೆಗೆ ಹಣದ ಬೇಡಿಕೆ: ಕಾವ್ರಾಡಿ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬಸವ ವಸತಿ ಯೋಜನೆಯ ಬಾಕಿ ಉಳಿದ ಕೆಲಸಕ್ಕೆ ಕಂತು ಬಿಡುಗಡೆ ಮಾಡಲು ಹಣದ ಬೇಡಿಕೆ ಇರಿಸಿದ ಆರೋಪದಡಿ ತಾಲೂಕಿನ ಕಾವ್ರಾಡಿ ಪಂಚಾಯತಿಯ ಕಾರ್ಯದರ್ಶಿ ಗೋಪಾಲ ದೇವಾಡಿಗ ಎಂಬುವವರನ್ನು ಉಡುಪಿ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Click Here

Call us

Click Here

ಬಸವ ವಸತಿ ಯೋಜನೆಯ ಕಂತು ಬಿಡುಗಡೆಗೊಳಿಸಲು ಜಾವೇದ್ ಕಾರ್ವಾಡಿ ಎಂಬುವವರಿಂದ, ಪಂಚಾಯತ್ ಕಾರ್ಯದರ್ಶಿ ಗೋಪಾಲ ದೇವಾಡಿಗ 15,000 ರೂ ಬೇಡಿಕೆ ಇರಿಸಿದ್ದರು. ಈ ಬಗ್ಗೆ ಫಲಾನುಭವಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಅದರಂತೆ ಆರೋಪಿಯನ್ನು ಟ್ರಾಪ್ ಮಾಡಿ ಹಣ ಪಡೆಯುವ ವೇಳೆ ಬಂಧಿಸಿದ್ದಾರೆ.

ಲೋಕಾಯುಕ್ತ ಎಸ್.ಪಿ ಸೈಮನ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಕೆ.ಸಿ. ಪ್ರಕಾಶ್ ಅವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್, ರಫೀಕ್ ಮತ್ತು ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರಾಘವೇಂದ್ರ, ಮಲ್ಲಿಕಾ, ರೋಹಿತ್, ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ರಮೇಶ್, ಸೂರಜ್, ಸುಧೀರ್, ಸತೀಶ್ ಆಚಾರ್ಯ ರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Leave a Reply