ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರ ನೇಮಕ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು:
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಶಿಕಾರಿಪುರ ಶಾಸಕ, ಬಿಜೆಪಿಯ ಹಾಲಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ನೇಮಕಗೊಳಿಸಲಾಗಿದೆ.

Call us

Click Here

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ವಿಜಯೇಂದ್ರ ಅವರನ್ನು ನೇಮಕಗೊಳಿಸಿದ ಆದೇಶ ಪ್ರಕಟಿಸಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ರೇಸ್ನಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸಿಟಿ ರವಿ ಹೆಸರು ಬಂದಿತ್ತು. ಆದರೆ ಬಿಜೆಪಿ ಹೈಕಮಾಂಡ್ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆ ಆಗಿರುವ ಬಿ.ವೈ ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನ ನೀಡಿದೆ.

ವಿಜಯೇಂದ್ರ ಯುವ ನಾಯಕರಾಗಿರುವ ಕಾರಣ ಕಾರ್ಯಕರ್ತರ ಪಡೆ ಇನ್ನಷ್ಟು ಬಲವಾಗುವ ಜತೆಗೆ ಪಕ್ಷ ಸಂಘಟನಾ ಸಾಮರ್ಥ್ಯವು ಹೆಚ್ಚಾಗುವ ನಿರೀಕ್ಷೆಯನ್ನು ಬಿಜೆಪಿ ಇಟ್ಟುಕೊಂಡಿದೆ. ಇದರ ಜೊತೆ ಪ್ರಬಲ ಸಮುದಾಯವಾದ ಲಿಂಗಾಯತ ಮತಬ್ಯಾಂಕ್ ರಕ್ಷಣೆ, ಸಮುದಾಯದ ನಾಯಕರ ವಲಸೆ ತಡೆಗೂ ಬ್ರೇಕ್ ಬೀಳುವ ಸಾಧ್ಯತೆಯಿದೆ.

ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದು ನಂತರ ಮಾಜಿ ಸಚಿವರಾದ ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿಗೆ ಟಿಕೆಟ್ ನೀಡದೇ ಇದ್ದದ್ದು ಲಿಂಗಾಯತ ಸಮುದಾಯದಲ್ಲಿ ಬಿಜೆಪಿ ವಿರುದ್ಧ ವ್ಯತಿರಿಕ್ತ ಸಂದೇಶ ರವಾನೆಯಾಗಿತ್ತು. ಲಿಂಗಾಯತ ಮತಗಳು ಕೈ ಜಾರುವ ಭೀತಿಯಲ್ಲಿರುವಾಗ ಬಿಜೆಪಿ ಈಗ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನವನ್ನು ನೀಡಿದೆ.

Click here

Click here

Click here

Click Here

Call us

Call us

Leave a Reply

Your email address will not be published. Required fields are marked *

nine + twelve =