ಸಾಧಕ ಕ್ರೀಡಾಪಟು ಮಣಿಕಂಠ ಹೋಬಳಿದಾರ್ ಅವರಿಗೆ ಬೈಂದೂರಿನಲ್ಲಿ ಹುಟ್ಟೂರ ಸನ್ಮಾನ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇತ್ತಿಚಿಗೆ ನಡೆದ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಭಾರತೀಯ ಯೋಧ ಬೈಂದೂರಿನ ಮಣಿಕಂಠ ಹೋಬಳಿದಾರ್ ಅವರು, 100ಮೀ. ಓಟವನ್ನು 10.23 ಸೆಕೆಂಡುಗಳಲ್ಲಿ ಪೂರೈಸಿ ‘ಭಾರತದ ಅತ್ಯಂತ ವೇಗದ ಓಟಗಾರ’ ಎಂಬ ದಾಖಲೆ ಮಾಡಿರುವುದನ್ನು ಗುರುತಿಸಿ, ಭಾನುವಾರ ಬೈಂದೂರಿನ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಅವರಿಗೆ ಹುಟ್ಟೂರ ಸನ್ಮಾನ ನೆರವೇರಿಸಲಾಯಿತು.

Call us

Click Here

Click here

Click Here

Call us

Visit Now

Click here

ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ 62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಸರ್ವಿಸಸ್ ತಂಡವನ್ನು ಪ್ರತಿನಿಧಿಸಿದ್ದ 21 ವರ್ಷದ ಮಣಿಕಂಠ ಹೋಬಳಿದಾರ್ ಅವರು, 100ಮೀ. ಓಟದ ಸೆಮಿಫೈನಲ್ನಲ್ಲಿ 10.23 ಸೆಕೆಂಡುಗಳಲ್ಲಿ ಓಡಿ ‘ಭಾರತದ ಅತ್ಯಂತ ವೇಗದ ಓಟಗಾರ’ ದ ದಾಖಲೆ ಮಾಡಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೊದಲು 10.26 ಸೆಕೆಂಡುಗಳಲ್ಲಿ ಓಡಿದ್ದ ದಾಖಲೆಯನ್ನು ಅವರು ಮುರಿದಿದ್ದರು.

ಮಣಿಕಂಠ ಅವರನ್ನು ಬೈಂದೂರು ಬೈಪಾಸ್ನಿಂದ ಮೆರವಣಿಗೆಯಲ್ಲಿ ಸ್ವಾಗತಿಸಿಕೊಂಡು, ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ವಿವಿಧ ಸಂಘಟನೆಗಳು ಹಾಗೂ ನಾಗರಿಕರು ಅವರನ್ನು ಅಭಿನಂದಿಸಿ ಗೌರವಿಸಿದರು.

ಈ ವೇಳೆ ಶಾಸಕರಾದ ಗುರುರಾಜ ಗಂಟಿಹೊಳೆ ಮಾತನಾಡಿ ಶುಭ ಹಾರೈಸಿದರು. ವಿವಿಧ ಸಂಘಟನೆಗಳ ಪರವಾಗಿ ಸುರೇಶ್ ಬಟವಾಡಿ ದೀಪಕ್ ಕುಮಾರ್ ಶೆಟ್ಟಿ, ಜಗನ್ನಾಥ ಶೆಟ್ಟಿ ನಾಕಟ್ಟೆ, ರಾಮಕೃಷ್ಣ ಸಿ, ಸುರೇಂದ್ರ ಡಿ., ಮಾಲಿನಿ ಕೆ ಮೊದಲಾದವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಪ್ರಕಾಶ್ ಪ್ರಭು ಶಿರೂರು, ಗೌರಿ ದೇವಾಡಿಗ, ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ನರೇಂದ್ರ ಶೇಟ್, ಶಂಕರ ತುಂಬೆಗದ್ದೆ, ನಾಗರಾಜ ಪಿ. ಯಡ್ತರೆ, ನರಸಿಂಹ ನಾಯಕ್, ರಂಗ ಯಡ್ತರೆ, ಸದಾನಂದ ಹೋಬಳಿದಾರ್ ಮೊದಲಾದವರು ಉಪಸ್ಥಿತರಿದ್ದರು.

Call us

ಕಾರ್ಯಕ್ರಮವನ್ನು ಸಂಘಟಿಸಿದ್ದ ಜಯಾನಂದ ಹೋಬಳಿದಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕರಾದ ಗಣಪತಿ ಹೋಬಳಿದಾರ್ ಹಾಗೂ ರಾಘವೇಂದ್ರ ದಡ್ಡು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

three × 3 =