ಬೈಂದೂರಿನಲ್ಲಿ ತಾಲೂಕು ಮಟ್ಟದ ಜನತಾ ದರ್ಶನ: 169 ಅರ್ಜಿ ಸ್ವೀಕಾರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಸರಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಜನತಾ ದರ್ಶನದ ಮೂಲಕ ದೂರುದಾರರು ಹಾಗೂ ಅಧಿಕಾರಿಗಳನ್ನು ಮುಖಾಮುಖಿ ಮಾಡಿ ಜನರ ಸಮಸ್ಯೆಗಳನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ದೈನಂದಿನ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗುತ್ತಿದ್ದು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

Call us

Click Here

ಬೈಂದೂರು ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ನಡೆದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಜನಸಾಮಾನ್ಯರು ತಮ್ಮ ಪ್ರತಿಯೊಂದು ಸಮಸ್ಯೆಗಳ ಬಗ್ಗೆ ರಾಜಧಾನಿ ಅಲೆದಾಟ ತಪ್ಪಿಸುವ ನೆಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಾಲೂಕು ಕೇಂದ್ರಗಳಲ್ಲಿ ಸೇರಿ ದೂರು ದಾಖಲಿಸಿಕೊಂಡು ತಕ್ಷಣಕ್ಕೆ ಸಾಧ್ಯವಾಗುವ ದೂರುಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿಸಿಕೊಡುವ ವ್ಯವಸ್ಥೆ ಜನತಾ ದರ್ಶನದ ಮೂಲಕ ಆಗಲಿದೆ. ಎಲ್ಲಾ ದೂರುಗಳನ್ನು ಪೋರ್ಟೆಲ್‌ನಲ್ಲಿ ದಾಖಲಿಸಿ ವಿಲೇಮಾಡಲಾಗುತ್ತಿದೆ. ತಕ್ಷಣಕ್ಕೆ ಪರಿಹರಿಸಲಾಗದ ದೂರುಗಳನ್ನು ಸರಕಾರ ಹಾಗೂ ಸಂಬಂಧಿತ ಇಲಾಖೆಗೆ ಕಳುಹಿಸಲಾಗುತ್ತದೆ ಎಂದರು.

ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನರ ಬಳಿಗೆ ಅಧಿಕಾರ ಹಾಗೂ ಅಧಿಕಾರಿಗಳು ಇದೊಂದು ಉತ್ತಮ ಪರಿಕಲ್ಪನೆಯಾಗಿದೆ. ಎಲ್ಲರೂ ಸೇರಿ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕಾಗಿ ಆರಂಭಗೊಂಡ ಈ ಅಭಿಯಾನ ಇಲ್ಲಿಗೆ ಮುಗಿಯದೇ ಎಲ್ಲರ ಸಮಸ್ಯೆಗಳಿಗೂ ತಾರ್ಕಿಕ ಅಂತ್ಯ ಸಿಗುವ ತನಕ ಮುಂದುವರಿಯಬೇಕಿದೆ ಎಂದರು.

ಕುಂದಾಪುರ ಉಪವಿಭಾಧಿಕಾರಿ ರಶ್ಮೀ ಎಸ್. ಆರ್., ಜಿಪಂ ಕಾರ್ಯನಿರ್ವಹಣಾಧಿಕಾರಿ ಎಚ್. ಪ್ರಸನ್ನ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಉಪಸ್ಥಿತರಿದ್ದರು.

ಬೈಂದೂರು ತಹಶೀಲ್ದಾರ್ ಪ್ರದೀಪ್ ಆರ್. ಸ್ವಾಗತಿಸಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಎನ್. ಭಾರತಿ ವಂದಿಸಿದರು. ಶಿಕ್ಷಕ ಗಣಪತಿ ಹೋಬಳಿದಾರ್ ನಿರೂಪಿಸಿದರು. 169ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಸಂಬಂಧಪಟ್ಟ ಜಿಲ್ಲಾ ಅಧಿಕಾರಿಗಳ ಸಮ್ಮುಖದಲ್ಲಿ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.

Click here

Click here

Click here

Click Here

Call us

Call us

Leave a Reply