ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ನಿಸರ್ಗ, ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಅಣಕು ಸಂಸತ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ.
ವಿದ್ಯಾರ್ಥಿನಿಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ ಜಿ ಮತ್ತು ಉಪನ್ಯಾಸಕ ವೃಂದದವರು ಮತ್ತು ಇ ಎಲ್ ಸಿ ಕ್ಲಬಿನ ಮಾರ್ಗದರ್ಶಕ ಉಪನ್ಯಾಸಕಿ ಸಂಧ್ಯಾ ನಾಯಕ ಅಭಿನಂದಿಸಿರುತ್ತಾರೆ.