ಉಪ್ಪುಂದದ ಕೊಡಿಹಬ್ಬ: ಶ್ರೀ ದುರ್ಗಾಪರಮೇಶ್ವರಿ ದೇವಳದ ಮನ್ಮಹಾರಥೋತ್ಸವ ಸಂಪನ್ನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇತಿಹಾಸ ಪ್ರಸಿದ್ಧ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ – ಉಪ್ಪುಂದದ ಕೊಡಿಹಬ್ಬ ಮಂಗಳವಾರ ಸಡಗರ, ಸಂಭ್ರಮದಿಂದ ಜರುಗಿತು.

Call us

Click Here

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದ್ವಿತೀಯ ಜಾತ್ರೆ ಉಪ್ಪುಂದ ಕೊಡಿಹಬ್ಬವಾಗಿದ್ದು, ಇಲ್ಲಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು.

ರಥೋತ್ಸವ ದಿನ ದೇವಳ ತಂತ್ರಿಗಳ ನೇತೃತ್ವದಲ್ಲಿ ದೇವಳದಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆಯಿತು. ಚಂಡ ಮದ್ದಳೆಗಳ ನಾದ, ನಾಸಿಕ್ ಬ್ಯಾಂಡ್, ಕೀಲು ಕುದುರೆ, ತಟ್ಟಿರಾಯ ರಥೋತ್ಸವದ ಮೆರಗು ಹೆಚ್ಚಿಸಿದ್ದವು. ರಥಬೀದಿಯಲ್ಲಿ ವ್ಯಾಪಾರ ಜೋರಾಗಿಯೇ ನಡೆಯುತ್ತಿದೆ.

ಬಳಿಕ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಬಹಿರಂಗ ಹರಾಜು ಮಾಡಲಾಯಿತು. ಸಂಜೆ ನಡೆದ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ರಥ ಎಳೆದು ಸಂಭ್ರಮಿಸಲಿದ್ದಾರೆ. ರಾತ್ರಿ ದೇವರ ಅವಭ್ರತಸ್ನಾನ ನಡೆಯಲಿದೆ.

ದೇವಳಕ್ಕೆ ಆಗಮಿಸುವ ಎಲ್ಲಾ ಮಾರ್ಗಗಳಲ್ಲಿ ಪೊಲೀಸರು ಬಂದೋವಸ್ತ್ ಮಾಡಿದ್ದರು. ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ. ಅವರ ಮಾರ್ಗದರ್ಶನದಲ್ಲಿ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸವಿತ್ರತೇಜ್ ಅವರು ಬೈಂದೂರು ಪಿಎಸ್ಐ ಮಹೇಶ್ ಕಂಬಿ ಹಾಗೂ ಇತರೆ ಠಾಣೆಗಳ ಪಿಎಸ್ಐಗಳ ನೇತೃತ್ವದಲ್ಲಿ ಬಂದೋವಸ್ತ್ ಮಾಡಲಾಗಿತ್ತು.

Click here

Click here

Click here

Click Here

Call us

Call us

Leave a Reply