ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಬಡಿದು ಸಾವು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಾವುಂದ ಬಳಿಯ ಮಸ್ಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Call us

Click Here

ಘಟನೆಯಲ್ಲಿ ನಾವುಂದ ಗಣೇಶನಗರ ನಿವಾಸಿ ಗೋವಿಂದ ಖಾರ್ವಿ (70ವ) ಮೃತಪಟ್ಟಿದ್ದಾರೆ. ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಎಸ್‌ಯುವಿ ವಾಹನ ವೇಗವಾಗಿ ತೆರಳುತ್ತಿರುವ ಸಂದರ್ಭ ಪಾದಾಚಾರಿ ರಸ್ತೆ ದಾಟುತ್ತಿದ್ದು, ಈ ವೇಳೆ ವಾಹನ ನಿಯಂತ್ರಣಕ್ಕೆ ಸಿಗದೇ ಪಾದಾಚಾರಿಗೆ ಡಿಕ್ಕಿಹೊಡೆದೆ.

ಅಪಘಾತದ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಗೋವಿಂದ ಖಾರ್ವಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಂದೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply