ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾ ಮೂಲಕ ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರು ರಿಷಭ್ ಶೆಟ್ಟಿ ಫೌಂಡೇಶನ್ ಮೂಲಕ ಅಳಿವಿನಂಚಿನಲ್ಲಿದ್ದ ತಾನು ಓದಿದ ಕೆರಾಡಿ ಸರ್ಕಾರಿ ಕನ್ನಡ ಶಾಲೆಯನ್ನು ದತ್ತು ಪಡೆಯುವ ನಿರ್ಧಾರ ಪ್ರಕಟಿಸಿದ್ದಾರೆ.
ಕೆರಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಭಾಗವಹಿಸಿ, ಕನ್ನಡ ಶಾಲೆ ಉಳಿಸುವ ಮತ್ತು ಬೆಳೆಸುವ ತನ್ನ ಕನಸನ್ನು ಬಿಚ್ಚಿಟ್ಟರು. ಶಾಲೆಯ ಶಿಕ್ಷಕರ ಕೊರತೆ ಸರಿದೂಗಿಸುವುದು, ಶಾಲಾ ವಾಹನ, ಕಟ್ಟಡ, ಪ್ರೀ ಸ್ಕೂಲ್ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರು, ಎಸ್ಡಿಎಂಸಿ ಸದಸ್ಯರು, ಬೈಂದೂರು ಬಿಇಓ ಸೇರಿದಂತೆ ಊರ ಪ್ರಮುಖರು ಉಪಸ್ಥಿತರಿದ್ದರು.
ಹುಟ್ಟೂರಿನ ಶಾಲೆಯ ದತ್ತುಪಡೆಯುವ ನಿರ್ಧಾರ ಪ್ರಕಟಿಸಿದ ರಿಷಬ್ ಶೆಟ್ಟಿಯವರನ್ನು ಅಭಿನಂದಿಸಿದರು.