ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ತೊಂಡ್ಲೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗೋವಿಂದರಾಯ ಎಸ್ (57 ವರ್ಷ) ಅವರು ಬೈಕಿನಿಂದ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.
ಶಿರೂರಿನಿಂದ ಮಯ್ಯಾಡಿಗೆ ತೆರಳುತ್ತಿದ್ದ ವೇಳೆ ಬೈಂದೂರು ಹೊಸ ಬಸ್ ನಿಲ್ದಾಣದ ಬಳಿ ಬೈಕಿನಿಂದ ನಿಯಂತ್ರಣ ತಪ್ಪಿ ಬಿದ್ದಿದ್ದು, ಈ ವೇಳೆ ಅವರಿಗೆ ಹೃದಯಾಘಾತವಾಗಿದೆ ಎನ್ನಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.
ಮಯ್ಯಾಡಿ ಸೇಡಿಮನೆಯವರಾದ ಗೋವಿರಾಯ ಅವರು ಮೃದು ಸ್ವಭಾವ ಹಾಗೂ ಸೇವಾನಿಷ್ಠೆಯಿಂದ ಹೆಸರಾಗಿದ್ದರು. ತೊಂಡ್ಲೆ ಶಾಲೆಯಲ್ಲಿ ವಿದ್ಯಾರ್ಥಿಗಳು ಗರಿಷ್ಠ ದಾಖಲಾತಿ ಹೊಂದುವಲ್ಲಿ ಶ್ರಮಿಸಿದ್ದರು. ಮೃತರು ಮಡದಿ, ಮಗ, ಮಗಳು ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಮೃತ ನಿಧನಕ್ಕೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯ ಅಧ್ಯಕ್ಷ ಶೇಖರ ಪೂಜಾರಿ, ಕಾರ್ಯದರ್ಶಿ ಗಣಪತಿ ಹೋಬಳಿದಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.